ವಿಜಯಪುರ: ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮನೆಗೆ ನುಗ್ಗಿ, ಮನೆಗೆ ಹಾನಿಯಾಗಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ನಗರದ ಹೊರ ವಲಯದ ಪ್ರದೇಶದಲ್ಲಿ ಜರುಗಿದೆ.
ನಗರಕ್ಕೆ ಹೊಂದಿಕೊಂಡಿರುವ ಆಲಕುಂಟೆ ನಗರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ಕಾರು ಏಕಾಏಕಿ ರಸ್ತೆ ಪಕ್ಕದ ಮನೆಗೆ ನುಗ್ಗಿದೆ. ಕಾರಿ ಗುದ್ದಿದ ರಭಸಕ್ಕೆ ಮನೆಯ ಬುಹತೇಕ ಭಾಗ ಕುಸಿದಿದ್ದು, ಚಾಲಕ ಹಾಗೂ ಅದರಲ್ಲಿದ್ದ ಇನ್ನೊಬ್ಬನಿಗೆ ಗಾಯಗಳಾಗಿವೆ.
ಕೂಡಲೇ ಇಬ್ಬರೂ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯರು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರ್ಶ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.
Saval TV on YouTube