ವಿಜಯಪುರ(Vijayapura): ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದಲ್ಲಿ ಹೊಲದ ಪಕ್ಕದಲ್ಲಿ ಇರುವ ಮನೆಯಲ್ಲಿ ಮಲಗಿದ್ದ ನಾಲ್ಕು ತಿಂಗಳ ಗರ್ಭಿಣೆಗೆ ವಿಷಕಾರಿ ಹಾವು ಕಚ್ಚಿದ ಪರಿಣಾಮ ಮೃತಪಟ್ಟಿದ್ದಾರೆ.
ನಿರ್ಮಲಾ ಯಲ್ಲಪ್ಪ ಚಲವಾದಿ(25) ಮೃತಪಟ್ಟ ನಾಲ್ಕು ತಿಂಗಳ ಗರ್ಭಿಣಿ.
ಹಾವು ಕಚ್ಚಿರುವುದು ಗೊತ್ತಾದ ತಕ್ಷಣ ಗರ್ಭಿಣಿ ಯನ್ನು ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಎಂದು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಹಾವು ಕಚ್ಚಿ ಗರ್ಭಿಣಿ ಮೃತಪಟ್ಟ ವಿಷಯ ತಿಳಿದ ನಂತರ ಕಂದಾಯ ನಿರೀಕ್ಷಕ ಮಹಾಂತೇಶ ಮಾಗಿ, ಹಾಗೂ ಗ್ರಾಮದ ಲೆಕ್ಕಾಧಿಕಾರಿ ಅನುಪಮಾ ಪೂಜಾರಿ ಅವರ ಮನೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಹಾಗೂ ದಾಖಲೆಗಳನ್ನು ಸಂಗ್ರಹಿಸಿ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ಕಂದಾಯ ನಿರೀಕ್ಷಕರು ತಿಳಿಸಿದ್ದಾರೆ.
Saval TV on YouTube