ವಿಜಯಪುರ: ಪೊಲೀಸ್ ಇಲಾಖೆಯ ವಿಜಯಪುರ ಜಿಲ್ಲೆಯಲ್ಲಿ ವೈರ್ ಲೆಸ್ ವಿಭಾಗದಲ್ಲಿ ಸೇವೆಯಲ್ಲಿದ್ದ ಪಿಎಸ್ಐ ಒಬ್ಬರು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
ವೈರ್ ಲೆಸ್ ವಿಭಾಗದ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿ ಶಂಕರಗೌಡ ಸಾರವಾಡ (28) ಮೃತರು.
ನರರೋಗ ಸಮಸ್ಯೆಯಿಂದ ಬಳಲುತ್ತಿದ್ದ ಶಂಕರಗೌಡ ಇವರನ್ನು ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಪಿಎಸ್ ಐ ಶಂಕರಗೌಡ ಸಾವಿಗೆ ಎಸ್ಪಿ ಋಷಿಕೇಶ ಭಗವಾನ್ ಸೇರಿದಂತೆ ಪೊಲೀಸ್ ಇಲಾಖೆಯ ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ.
Saval TV on YouTube