ಮನೆ ಉದ್ಯೋಗ ವಿಜಯಪುರ ಜಿಲ್ಲಾ ಪಂಚಾಯತ್’ನಲ್ಲಿ ಜಲ ಸಂಜೀವಿನಿ ಜಿಲ್ಲಾ ಸಂಯೋಜಕ ಹುದ್ದೆಗೆ ಅರ್ಜಿ ಆಹ್ವಾನ

ವಿಜಯಪುರ ಜಿಲ್ಲಾ ಪಂಚಾಯತ್’ನಲ್ಲಿ ಜಲ ಸಂಜೀವಿನಿ ಜಿಲ್ಲಾ ಸಂಯೋಜಕ ಹುದ್ದೆಗೆ ಅರ್ಜಿ ಆಹ್ವಾನ

0

ವಿಜಯಪುರ ಜಿಲ್ಲಾ ಪಂಚಾಯತ್’ನಲ್ಲಿ 1 ಜಲಸಂಜೀವಿನಿ ಜಿಲ್ಲಾ ಸಂಯೋಜಕ ಹುದ್ದೆ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸರ್ಕಾರಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಹುದ್ದೆಗೆ ಕೂಡಲೇ ಅರ್ಜಿ ಹಾಕಿ. ಡಿಸೆಂಬರ್ 30, 2022 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಉದ್ಯೋಗಾಂಕ್ಷಿಗಳು ಆಫ್ಲೈನ್/ ಪೋಸ್ಟ್ ಮುಖಾಂತರ ಈ ಕೆಲಸಕ್ಕೆ ಅಪ್ಲೈ ಮಾಡಿ.

ವಿದ್ಯಾರ್ಹತೆ:

ವಿಜಯಪುರ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಎಸ್ಸಿ, ಬಿ.ಟೆಕ್ ಪೂರ್ಣಗೊಳಿಸಿರಬೇಕು.

ವಯೋಮಿತಿ:

ವಿಜಯಪುರ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 65 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಸಂಬಳ:

ಜಲಸಂಜೀವಿನಿ ಜಿಲ್ಲಾ ಸಂಯೋಜಕ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ತಿಂಗಳಿಗೆ 50,000 ಸಂಬಳ ಕೊಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

ಸಂದರ್ಶನ

ಅರ್ಜಿ ಸಲ್ಲಿಸುವುದು ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆ, ಶೈಕ್ಷಣಿಕ ದಾಖಲಾತಿಗಳು, ಅನುಭವ ಪ್ರಮಾಣ ಪತ್ರ, ಗುರುತಿನ ಚೀಟಿ, ಇತ್ತೀಚಿನ ಭಾವಚಿತ್ರ ಹಾಗೂ ರೆಸ್ಯೂಮ್’ನ್ನು ಈ ಕೆಳಕಂಡ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕು.

ಡೆವಲಪ್ಮೆಂಟ್ ಬ್ರಾಂಚ್

ಜಿಲ್ಲಾ ಪಂಚಾಯತ್

ವಿಜಯಪುರ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22/12/2022

ಅರ್ಜಿ ಸಲ್ಲಿಸಲು ಕೊನೆಯ ದಿನ: 30/12/2022

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08352-276378 ಗೆ ಕರೆ ಮಾಡಿ

ಹಿಂದಿನ ಲೇಖನಮಕರ ರಾಶಿಯಲ್ಲಿ ಶುಕ್ರನ ಸಂಚಾರ: ಜನವರಿಯಲ್ಲಿ ಈ ರಾಶಿಯವರಿಗೆ ಶುಕ್ರದೆಸೆ
ಮುಂದಿನ ಲೇಖನಒಂದು ದಿನ ಮುಂಚಿತವಾಗಿ ವಿಧಾನಮಂಡಲ ಅಧಿವೇಶನ ಮುಕ್ತಾಯ