ಹುಣಸೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದಡಿ ಶಾಸಕ ಜಿ.ಟಿ ದೇವೇಗೌಡ ಪತ್ನಿ ಲಲಿತಾ ಜಿ.ಟಿ ದೇವೇಗೌಡ ವಿರುದ್ಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಲಲಿತಾ ಜಿಟಿ ದೇವೇಗೌಡ ರವರು ಹಣಸೂರಿನ ಹನಗೋಡು ಹೋಬಳಿ ಕರ್ಣಕುಪ್ಪೆ ಗ್ರಾಮದಲ್ಲಿ ಏಪ್ರಿಲ್ 6 ರಂದು ನಡೆದ ಗುದ್ದಲಿಪೂಜೆ ಕಾರ್ಯಕ್ರಮದಲ್ಲಿ ಭಾಹವಹಿಸಿದ್ದರು.
ಕಾರ್ಯಕ್ರಮದಲ್ಲಿ ಭಾಗವಹಿಸಲು ನಿಯಮಾನುಸಾರ ಚುನಾವಣಾಧಿಕಾರಿಗಳಿಂದ ಪೂರ್ವಾನುಮತಿ ಪಡೆಯದೆ ಭಾಗವಹಿಸಿದ್ದರು.
ಅಲ್ಲದೆ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಚುನಾವಣಾ ಘೋಷಣೆ ಕೂಗಿದ್ದರು. ಇದನ್ನು ಪರಿಶೀಲಿಸಿದ ಫ್ಲೈಯಿಂಗ್ ಸ್ಕ್ವಾಡ್ ನ ಅಧಿಕಾರಿ ಸುಬ್ರಹ್ಮಣ್ಯ ರವರು ಕ್ರಮ ಕೈಗೊಳ್ಳುವಂತೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.