ಮನೆ ರಾಜ್ಯ ನೀತಿ ಸಂಹಿತೆ ಉಲ್ಲಂಘನೆ: ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ವಿರುದ್ಧ ಎಫ್‌ಐಆರ್‌

ನೀತಿ ಸಂಹಿತೆ ಉಲ್ಲಂಘನೆ: ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ವಿರುದ್ಧ ಎಫ್‌ಐಆರ್‌

0

ಮಂಡ್ಯ (Mandya)-ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ (Dr.C.N.Ashwath Narayan) ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

2ನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರ ನ್ಯಾಯಾಲಯದ ನಿರ್ದೇಶನದ ಮೇರೆಗೆ ಅಶ್ವತ್ಥ ನಾರಾಯಣ ವಿರುದ್ಧ ನಗರದ ಪೂರ್ವ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ನ್ಯಾಯಾಲಯದ ನಿರ್ದೇಶನದ ಮೇರೆಗೆ ಸಚಿವ ಅಶ್ವತ್ಥನಾರಾಯಣ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದ್ದು, ನೀತಿ ಸಂಹಿತೆ ಉಲ್ಲಂಘಿಸಿದ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ಯತೀಶ್‌ ತಿಳಿಸಿದರು.

ಮೇ 16ರಂದು ಸಚಿವ ಅಶ್ವತ್ಥ ನಾರಾಯಣ ಅವರು ನಗರದ ವಿವಿಧ ಕಾಲೇಜುಗಳಲ್ಲಿ ವಿಧಾನ ಪರಿಷತ್‌ ದಕ್ಷಿಣ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್‌ ಪರ ಪ್ರಚಾರ ನಡೆಸಿದ್ದರು. ಅಧಿಕಾರ ದುರ್ಬಳಕೆ ಮಾಡಿಕೊಂಡು ಸಚಿವರು ಕಾಲೇಜುಗಳಲ್ಲಿ ಪ್ರಚಾರ ಸಭೆ ನಡೆಸಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್‌ ಚುನಾವಣಾಧಿಕಾರಿಗೆ ದೂರು ಸಲ್ಲಿಸಿತ್ತು.

ಸಚಿವರು ನೀತಿ ಸಂಹಿತೆ ಉಲ್ಲಂಘಿಸಿದ್ದು, ಕಾನೂನು ಕ್ರಮ ಜರುಗಿಸುವಂತೆ ಕೋರಿ ಮಾದರಿ ನೀತಿ ಸಂಹಿತೆ ತಂಡದ ಮುಖ್ಯಸ್ಥರೂ ಆದ ಜಿಲ್ಲಾ ಪಂಚಾಯಿತಿ ಸಿಇಒ ಸಹಾಯಕ ಚುನಾವಣಾಧಿಕಾರಿಗೆ ವರದಿ ನೀಡಿದ್ದರು. ಜೊತೆಗೆ 2ನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಖಾಸಗಿ ದೂರು ಕೂಡ ನೀಡಿದ್ದರು. ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುವಂತೆ ನ್ಯಾಯಾಲಯ ಪೂರ್ವ ಠಾಣೆ ಪೊಲೀಸರಿಗೆ ಸೂಚಿಸಿತ್ತು.

ಹಿಂದಿನ ಲೇಖನಆರ್‌ಎಸ್‌ ಎಸ್‌ ಅನ್ನು ಟೀಕಿಸಿದ ಸಿದ್ದರಾಮಯ್ಯ ಜನರ ಕ್ಷಮೆಯಾಚಿಸಬೇಕು: ಕೆ.ಎಸ್.ಈಶ್ವರಪ್ಪ
ಮುಂದಿನ ಲೇಖನದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಗೆ ನಾನು ತಟಸ್ಥ: ಸಂಸದೆ ಸುಮಲತಾ ಅಂಬರೀಶ್