ಮನೆ ರಾಜಕೀಯ ಕಾಂಗ್ರೆಸ್ ಸರ್ಕಾರದಿಂದ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ

ಕಾಂಗ್ರೆಸ್ ಸರ್ಕಾರದಿಂದ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ

0

ಬೆಂಗಳೂರು: ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಿನ್ನೆ ಉಪಚುನಾವಣೆ ಘೋಷಣೆಯಾಗಿದೆ. ಘೋಷಣೆಯಾದ ಮರುಕ್ಷಣದಿಂದಲೇ ಚುನಾವಣಾ ಮಾದರಿ ನೀತಿ ಸಂಹಿತೆಯೂ ಜಾರಿಗೆ ಬಂದಿದೆ. ಈ ಕುರಿತು ಕೇಂದ್ರ ಚುನಾವಣಾ ಆಯೋಗ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಹಾಗೂ ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಪತ್ರವನ್ನೂ ತಲುಪಿಸಿದೆ.

Join Our Whatsapp Group

ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವಾಗ ಸರ್ಕಾರದ ಖರ್ಚಿನಲ್ಲಿ ಮಾಧ್ಯಮಗಳಲ್ಲಿ ಜಾಹೀರಾತು ಪ್ರಕಟಿಸುವುದಾಗಲಿ, ಸರ್ಕಾರದ ಸಾಧನೆಗಳ ಬಗ್ಗೆ ಪ್ರಚಾರ ಮಾಡುವುದಾಗಲಿ, ಜಾಹೀರಾತುಗಳಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರುಗಳ ಫೋಟೋ ಬಳಸುವುದಾಗಲಿ ನೀತಿ ಸಂಹಿತೆಯ ಉಲ್ಲಂಘನೆ ಆಗುತ್ತದೆ ಎಂಬ ವಿಷಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿಳಿದಿಲ್ಲವೇ? ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಎಕ್ಸ್ ನಲ್ಲಿ ಪ್ರಶ್ನಿಸಿದ್ದಾರೆ.

ವಾಲ್ಮೀಕಿ ಜಯಂತಿಯ ಪ್ರಯುಕ್ತ ಇಂದಿನ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಸರ್ಕಾರಿ ಜಾಹೀರಾತಿನಲ್ಲಿ ಸರ್ಕಾರದ ಸಾಧನೆಗಳು ಅಂತ ಹೇಳಿಕೊಂಡಿರುವ ಜೊತೆಗೆ ಮುಖ್ಯಮಂತ್ರಿ ಹಾಗು ಉಪಮುಖ್ಯಮಂತ್ರಿಗಳ ಫೋಟೋ ಸಹ ಬಳಸಲಾಗಿದೆ.  ಒಂದು ವೇಳೆ ವಾಲ್ಮೀಕಿ ಜಯಂತಿಗೆ ಶುಭಾಶಯ ಕೋರುವ ಉದ್ದೇಶ ಮಾತ್ರ ಇದಿದ್ದರೆ, ಸರ್ಕಾರದ ಸಾಧನೆಗಳು ಹಾಗು ಸಿಎಂ ಮತ್ತು ಡಿಸಿಎಂ ಭಾವಚಿತ್ರ ಇಲ್ಲದೆ ಕೇವಲ ಶುಭಾಶಯ ಕೋರುವ ಜಾಹಿರಾತು ಪ್ರಕಟಿಸಬಹುದಿತ್ತು. ಆದರೆ ಸರ್ಕಾರ ಉದ್ದೇಶಪೂರ್ವಕವಾಗಿಯೇ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವುದು ಸ್ಪಷ್ಟವಾಗಿದೆ ಎಂದಿದ್ದಾರೆ.

 ಮಾದರಿ ನೀತಿ ಸಂಹಿತೆಯ ಎಲ್ಲ ನಿಯಮಗಳನ್ನೂ ಗಾಳಿಗೆ ತೂರಿ, ಸರ್ಕಾರಿ ಖರ್ಚಿನಲ್ಲಿ ಇಂದು ಪ್ರಕಟವಾಗಿರುವ ಜಾಹೀತರಾತನ್ನ ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಎಂದು ಪರಿಗಣಿಸಿ ರಾಜ್ಯ ಸರ್ಕಾರದ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.