ಮಣಿಪುರ: ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಬೆಳಗ್ಗೆ ಇಬ್ಬರು ವೃದ್ಧರ ಮೃತದೇಹಗಳು ಪತ್ತೆಯಾಗಿದ್ದು, ಆರು ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ನಿನ್ನೆ ನಡೆದ ಗುಂಡಿನ ದಾಳಿಯ ನಂತರ ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಒಂದು ದಿನದ ಹಿಂದೆ, ಜಿರಿಬಾಮ್ ಜಿಲ್ಲೆಯಲ್ಲಿ ಶಂಕಿತ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆದಿತ್ತು. ಇದರಲ್ಲಿ 11 ಉಗ್ರರು ಹತರಾಗಿದ್ದರು. ನಾಪತ್ತೆಯಾದವರಿಗಾಗಿ ಆರಂಭಿಸಲಾದ ಶೋಧ ಕಾರ್ಯಾಚರಣೆಯಲ್ಲಿ ಜಕುರಧೋರ್ ಕರೋಂಗ್ ಪ್ರದೇಶದಲ್ಲಿ ಅವಶೇಷಗಳಡಿಯಲ್ಲಿ ಲೈಶ್ರಾಮ್ ಬಾಲೆನ್ ಮತ್ತು ಮೈಬಮ್ ಕೇಶೋ ಅವರ ಶವಗಳು ಪತ್ತೆಯಾಗಿವೆ.
Saval TV on YouTube