ಮನೆ ರಾಜ್ಯ ನಾಳೆಯಿಂದ 21ರವರೆಗೆ ಅರಮನೆ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ

ನಾಳೆಯಿಂದ 21ರವರೆಗೆ ಅರಮನೆ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ

0

ಮೈಸೂರು(Mysuru): ಜೂನ್ 21 ರಂದು ಅರಮನೆ ಆವರಣದಲ್ಲಿ ನಡೆಯುವ 8ನೇ ಅಂತರಾಷ್ಟ್ರೀಯ ಯೋಗಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಹಿನ್ನೆಲೆಯಲ್ಲಿ ಮೈಸೂರು ಅರಮನೆ ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.

ಜೂನ್ 19ರಿಂದ ಜೂನ್ 21ರ ಮಧ್ಯಾಹ್ನ 12ರವರೆಗೆ ಪ್ರವಾಸಿಗರ ಪ್ರವೇಶಕ್ಕೆ ತಾತ್ಕಾಲಿಕವಾಗಿ ‌ನಿರ್ಬಂಧವಿರಲಿದೆ.

ಅರಮನೆ ಆವರಣದಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ನಡೆಯಲಿದ್ದು, ಅದಕ್ಕಾಗಿ ಪೂರ್ವ ಸಿದ್ಧತೆ ಕೈಗೊಳ್ಳಬೇಕಿರುವುದರಿಂದಾಗಿ ನಿರ್ಬಂಧ ವಿಧಿಸಲಾಗಿದೆ.

ಅರಮನೆ ಆವರಣದಲ್ಲಿ ನಡೆಯುವ ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನೂ ಶುಕ್ರವಾರದಿಂದ ಜೂನ್ 22ರವರೆಗೆ ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಎಂದು ಅರಮನೆ ಮಂಡಳಿ ತಿಳಿಸಿದೆ.

ಹಿಂದಿನ ಲೇಖನಅಗ್ನಿಪಥ್ ಯೋಜನೆಗೆ ವಿರೋಧ: ಹಿಂಸಾತ್ಮಕ ಪ್ರತಿಭಟನೆ ಬೇಡ ಎಂದ ಸಿದ್ಧರಾಮಯ್ಯ
ಮುಂದಿನ ಲೇಖನಪ್ರತಿಭಟನೆ: ಕಾಂಗ್ರೆಸ್‌ ಮುಖಂಡರ ವಿರುದ್ಧ ಪ್ರಕರಣ ದಾಖಲು