ಮನೆ ರಾಷ್ಟ್ರೀಯ ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ: ಪ್ರಧಾನಿ ಮೋದಿ ಮನವಿ

ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ: ಪ್ರಧಾನಿ ಮೋದಿ ಮನವಿ

0

ನವದೆಹಲಿ: ಇಂದು ಮೊದಲ ಹಂತದ ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದ್ದು ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ಮೋದಿ ಮತದಾರರಲ್ಲಿ ಮನವಿ ಮಾಡಿದ್ದಾರೆ.

ಲೋಕಸಭಾ ಚುನಾವಣೆ ಕುರಿತು ಸಾಮಾಜಿಕ ಜಾಲತಾಣ X ನಲ್ಲಿ ಇಂಗ್ಲಿಷ್, ಹಿಂದಿ, ತಮಿಳು, ಮರಾಠಿ, ಬೆಂಗಾಲಿ ಮತ್ತು ಅಸ್ಸಾಮಿ ಸೇರಿ ಆರು ಭಾಷೆಗಳಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ‘ಯುವ ಮತ್ತು ಮೊದಲ ಬಾರಿಗೆ ಮತದಾನ ಮಾಡುವವರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಹಕ್ಕು ಚಲಾಯಿಸಬೇಕು ಅಲ್ಲದೆ ಇಲ್ಲಿ ಪ್ರತಿಯೊಬ್ಬರ ಧ್ವನಿಯೂ ಮುಖ್ಯವಾಗಿದೆ, ಒಂದೊಂದು ಮತವೂ ಒಬ್ಬ ಉತ್ತಮ ಅಭ್ಯರ್ಥಿಯ ಭವಿಷ್ಯವನ್ನು ನಿರ್ಧರಿಸುತ್ತದೆ ಎಂದು ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸುವವರು ಮತದಾರರು ಹಾಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿ ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಎಂದು ಕೇಳಿಕೊಂಡಿದ್ದಾರೆ.

ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನವು 21 ರಾಜ್ಯಗಳ 102 ಸ್ಥಾನಗಳಲ್ಲಿ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇಂದು ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಯಿತು.

ಹಿಂದಿನ ಲೇಖನಹುಬ್ಬಳ್ಳಿ ಕಾಲೇಜು ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣ: ಗೃಹ ಸಚಿವ ಜಿ ಪರಮೇಶ್ವರ್​ ಹೇಳಿದ್ದೇನು ?
ಮುಂದಿನ ಲೇಖನಕೀನ್ಯಾದಲ್ಲಿ ಸೇನಾ ಹೆಲಿಕಾಪ್ಟರ್ ಪತನ; ಸೇನಾ ಮುಖ್ಯಸ್ಥ ಸೇರಿ 9 ಯೋಧರು ಸಾವು