ಬೆಂಗಳೂರು: ವೋಟರ್ ಐಡಿ ಪರಿಷ್ಕರಣೆ ಅಕ್ರಮ ಕುರಿತ ಕಾಂಗ್ರೆಸ್ ಆರೋಪ ಸುಳ್ಳು ಹಾಗೂ ಆಧಾರ ರಹಿತ. ಈ ಸಂಸ್ಥೆಗಳಿಗೂ ಸರ್ಕಾರಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಸಚಿವ ಅಶ್ವತ್ಥ್ ನಾರಾಯಣ್ ಸ್ಪಷ್ಟಪಡಿಸಿದ್ದಾರೆ.
ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದೆ ಎಂಬ ಕಾಂಗ್ರೆಸ್ ಆರೋಪ ಕುರಿತು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೈ ನಾಯಕರು ಏನೋ ಹೇಳಿಕೆ ಕೊಡಬೇಕಿತ್ತು ಕೊಟ್ಟಿದ್ದಾರೆ. ಯಾರು ಏನು ತಪ್ಪು ಮಾಡಿದ್ದಾರೋ ಗೊತ್ತಿಲ್ಲ. ಯಾರೇ ತಪ್ಪು ಮಾಡಿದ್ದರೇ ತಪ್ಪು ತಪ್ಪೇ ಈ ರೀತಿ ಸರ್ವೆ ಚುನಾವಣಾ ಆಯೋಗದ ಅಡಿ ನಡೆಯುತ್ತೆ ಎಂದರು.
ಕಾಂಗ್ರೆಸ್ ನಾಯಕರು ಭ್ರಷ್ಠಚಾರದಲ್ಲಿ ತುಂಬಿ ತುಳುಕಿದ್ದಾರೆ. ಈ ರೀತಿ ಆರೋಪ ಮಾಡಲು ಕಾಂಗ್ರೆಸ್ ನಾಯಕರಿಗೆ ನೈತಿಕತೆ ಇಲ್ಲ. ಹೊಂಬಾಳೆ ಸಂಸ್ಥೆ ಇದಕ್ಕೂ ಯಾವುದೇ ಸಂಬಂಧ ಇಲ್ಲ. ಇವರಂತೂ ಒಳ್ಳೆಯದು ಮಾಡಲ್ಲ. ಒಳ್ಳೆಯದನ್ನು ಮಾಡಲು ಬಿಡಲ್ಲ. ತನಿಖೆ ಮಾಡಿಸಲು ಹೇಳಲು ನಾವು ಯಾರು..? ಇದು ಚುನಾವಣಾ ಆಯೋಗಕ್ಕೆ ಸಂಬಂಧಿಸಿದ ವಿಚಾರ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಹೋಗಿ ದೂರು ನೀಡಲಿ ಎಂದು ನೀಡಿದರು.
ವೋಟರ್ ಐಡಿ ಪರಿಷ್ಕರಣೆ ಅಕ್ರಮದಲ್ಲಿ ನಾನು ಭಾಗಿಯಾಗಿಲ್ಲ. ರವಿಕುಮಾರ್ ಅನ್ನೋರು ನನಗೆ ಗೊತ್ತು. ರವಿ ಕುಮಾರ್ ನಮ್ಮ ಕ್ಷೇತ್ರದವರು. ಚಿಲುಮೆ ಸಂಸ್ಥೆಯವರು ಏನು ಅಕ್ರಮ ಮಾಡಿದ್ದಾರೋ ಗೊತ್ತಿಲ್ಲ. ಚಿಲುಮೆ ಸಂಸ್ಥೆಗೆ ಅವಕಾಶ ಕೊಟ್ಟಿದ್ದು ಚುನಾವಣಾ ಆಯೋಗ. ಇದಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧ ಇಲ್ಲ ಎಂದರು.