ಮನೆ ಸುದ್ದಿ ಜಾಲ 18 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮತದಾನ ಮಾಡಿ: ಎಚ್. ಕೆ ಸತೀಶ್

18 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮತದಾನ ಮಾಡಿ: ಎಚ್. ಕೆ ಸತೀಶ್

0

ಮೈಸೂರು: 18 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹೆಚ್.ಕೆ ಸತೀಶ್ ಅವರು ತಿಳಿಸಿದರು.

Join Our Whatsapp Group

ತಾಲೂಕು ಸ್ವೀಪ್ ಸಮಿತಿ ಹಾಗೂ ಕುಪ್ಪೆಹಂತ ಗ್ರಾಮ ಪಂಚಾಯಿತಿ ವತಿಯಿಂದ ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆಯಲ್ಲಿರುವ ಶ್ರೀ ರಾಮ ಸಹಕಾರ ಸಕ್ಕರೆ ಕಾರ್ಖಾನೆಯಲ್ಲಿ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕುರಿತ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮೇ 10 ರಂದು ನಡೆಯಲಿರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಕಡ್ಡಾಯ ಮತದಾನ ಮಾಡುವುದರ ಮೂಲಕ ನಿಮ್ಮ ಮತದಾನದ ಹಕ್ಕನ್ನು ಚಲಾಯಿಸಲು ಮುಂದಾಗಬೇಕು ಎಂದು ಕರೆ ನೀಡಿದರು.

ತಾಲೂಕಿನಲ್ಲಿ ಕಳೆದ ಬಾರಿ ಕಡಿಮೆ ಮತದಾನ ಆಗಿರುವ ಮತದಾನ ಕೇಂದ್ರಗಳಲ್ಲಿ ಹೆಚ್ಚಿನ ಮತದಾನ ಮಾಡುವಂತೆ ತಾಲೂಕು ಸ್ವೀಪ್ ಸಮಿತಿ ವತಿಯಿಂದ ವಿವಿಧ ರೀತಿಯ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಆದ್ದರಿಂದ ಎಲ್ಲಾ ಸಾರ್ವಜನಿಕರು ಮತದಾನದಲ್ಲಿ ಪಾಲ್ಗೊಂಡು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಮನವಿ ಮಾಡಿದರು.

ಬಳಿಕ ತಾಲೂಕು ಪಂಚಾಯಿತಿ ಮ-ನರೇಗಾ ಸಹಾಯಕ ನಿರ್ದೇಶಕಿ ನೇತ್ರಾವತಿ ಅವರು ಮಾತನಾಡಿ ಎಲ್ಲಾ ಮತದಾರರು ಪ್ರಜಾಪ್ರಭುತ್ವ ಹಬ್ಬದಲ್ಲಿ ಭಾಗವಹಿಸಿ, ಕಡ್ಡಾಯ ಮತದಾನ ಮಾಡುವಂತೆ ತಿಳಿಸಿದರು.

ಇದೇವೇಳೆ ಮಾನವ ಸರಪಳಿ ರಚಿಸಿ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು.

ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕಿ ಅನಿತಾ ಕುಪ್ಪೆಹಂತ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುನೀಲ್. ಹಳಿಯೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಚಿದಾನಂದ. ತಾಲೂಕು ಐ.ಇ.ಸಿ ಸಂಜಯ್ ಬಿ.ಸಿ, ಕಾರ್ಖಾನೆ ನೌಕರರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.