ಮನೆ ಸುದ್ದಿ ಜಾಲ ಪ್ರಜಾಪ್ರಭುತ್ವ ವ್ಯವಸ್ಧೆಯಲ್ಲಿ ಮತದಾನ ಮಾಡುವುದು ಪ್ರತಿಯೊಬ್ಬರ ಸಂವಿಧಾನಾತ್ಮಕ ಹಕ್ಕು: ಕೆ.ಎಂ.ಗಾಯಿತ್ರಿ

ಪ್ರಜಾಪ್ರಭುತ್ವ ವ್ಯವಸ್ಧೆಯಲ್ಲಿ ಮತದಾನ ಮಾಡುವುದು ಪ್ರತಿಯೊಬ್ಬರ ಸಂವಿಧಾನಾತ್ಮಕ ಹಕ್ಕು: ಕೆ.ಎಂ.ಗಾಯಿತ್ರಿ

0

ಮೈಸೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡುವುದು ಪ್ರತಿಯೊಬ್ಬರ ಸಂವಿಧಾನಾತ್ಮಕ ಹಕ್ಕಾಗಿದ್ದು, ಯಾರು ಮತದಾನದಿಂದ ದೂರ ಉಳಿಯಬಾರದು ಎಂದು ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಎಂ.ಗಾಯಿತ್ರಿ ಅವರು ತಿಳಿಸಿದರು.

Join Our Whatsapp Group

ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ವಿಶೇಷಚೇತನರಿಗೆ ಮತದಾನದ ಜಾಗೃತಿ ಮೂಡಿಸುವ ಸಲುವಾಗಿ ಆಯೋಜಿಸಿದ್ದ ವಿಶೇಷಚೇತನರಿಂದ ತ್ರಿಚಕ್ರ ವಾಹನದ ಮೂಲಕ ಜಾಥಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿಶೇಷಚೇತನರು ಮೇ.10 ರಂದು ಮತ ಚಲಾಯಿಸುವಂತೆ ಹಾಗೂ ಅವರಿಗೆ ಆತ್ಮವಿಶ್ವಾಸ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಿದೆ. ವಿಶೇಷಚೇತನರಿಗೆ ತಮ್ಮ ಮತದಾನದ ಹಕ್ಕನ್ನು ಚಲಾಯಿಸಲು ಅನುಕೂಲವಾಗುವಂತೆ ವಿಶೇಷಚೇತನರ ಮತಗಟ್ಟೆಗಳನ್ನು ವಿಶೇಷವಾಗಿ ನಿರ್ಮಿಸಿದ್ದು, ಅಲ್ಲಿ ರ್ಯಾಂಪ್, ಗಾಲಿ ಚೇರ್ ವ್ಯವಸ್ಥೆ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಅವರ ಸಿಬ್ಬಂದಿಯನ್ನು ನೇಮಿಸಲಾಗಿದೆ. ಅವರು ಸರತಿ ಸಾಲಿನಲ್ಲಿ ನಿಂತು ಆಯಾಸ ಪಡುವುದು ಬೇಡ ಎಂಬ ಉದ್ದೇಶದಿಂದ ನಿರೀಕ್ಷಣಾ ಕೊಠಡಿಗಳನ್ನು ನಿರ್ಮಿಸಲಾಗಿದೆ ಎಂದು ಹೇಳಿದರು.

ಜಾಥಾ ಜಿಲ್ಲಾ ಪಂಚಾಯತ್ ಆವರಣದಿಂದ ತೆರಳಿ, ರಾಮಸ್ವಾಮಿ ವೃತ್ತ, ಸಂಸ್ಕೃತ ಪಾಠಶಾಲೆ ವೃತ್ತ, ಗನ್ ಹೌಸ್ ವೃತ್ತ, ಹಾರ್ಡಿಂಗ್ ವೃತ್ತದ ಮೂಲಕ ಅರಮನೆ ಆವರಣದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನ ಬಳಿ ಅಂತ್ಯಗೊಳ್ಳಲಿದೆ. ಸುಮಾರು 40 ಕ್ಕೂ ಹೆಚ್ಚು ವಿಶೇಷಚೇತನರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಜಿಪಂ ಉಪಕಾರ್ಯದರ್ಶಿ (ಅಭಿವೃದ್ಧಿ) ಎಂ.ಕೃಷ್ಣರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣ, ಜಿಪಂ ಸಹಾಯಕ ನಿರ್ದೇಶಕರಾದ ಎಂ.ಎಲ್. ವಿಶ್ವನಾಥ್, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಮಾಲಿನಿ, ಜಿಲ್ಲಾ ವಿಕಲಚೇತನರ ಒಕ್ಕೂಟದ ಅಧ್ಯಕ್ಷ ಶ್ರೀಧರ್ ಧೀಕ್ಷಿತ್ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.