ಉತ್ತರ ಕನ್ನಡ : ಪರಿಸರ ಪ್ರೇಮಿ ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ವಿಧಿವಶರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ತುಳಸಿಗೌಡ ಅವರಿಗೆ 86 ವರ್ಷ ವಯಸ್ಸಾಗಿತ್ತು. ಹೊನ್ನಳ್ಳಿ ಗ್ರಾಮದ ತಮ್ಮ ನಿವಾಸದಲ್ಲಿ ತುಳಸಿಗೌಡ ಅವರು ಕೊನೆಯುಸಿರೆಳೆದಿದ್ದಾರೆ.
ಪರಿಸರ ಪ್ರೇಮಿ ತುಳಸಿಗೌಡ ಅವರು ವರ್ಷಕ್ಕೆ 30 ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಬೆಳೆಸಿದ್ದರು. ಕಳೆದ 14 ವರ್ಷಕ್ಕೂ ಹೆಚ್ಚು ಕಾಲ ಗಿಡ ನೆಟ್ಟು ಬೆಳೆಸುವ ಕಾಯಕದಲ್ಲಿ ತೊಡಗಿದ್ದರು.
ತುಳಸಿಗೌಡ ಅವರ ಮನೆಯಲ್ಲಿ ತೀರಾ ಬಡತನ ಇದ್ರು ಹಸಿರು ಕ್ರಾಂತಿ ಮಾಡಿ ಇಡೀ ದೇಶದ ಗಮನ ಸೆಳೆದಿದ್ದರು.
ತುಳಸಿಗೌಡ ಅವರ ಪರಿಸರ ಪ್ರೇಮವನ್ನ ಮೆಚ್ಚಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ.
2020ರಲ್ಲಿ ಅಂದಿನ ರಾಷ್ಟ್ರಪತಿ ರಮಾನಾಥ ಕೋವಿಂದ ಅವರಿಂದ ತುಳಸಿಗೌಡ ಅವರು ಪದ್ಮಶ್ರೀ ಪ್ರಶಸ್ತಿ ಸ್ವಿಕರಿಸಿದ್ದರು. ತುಳಸಿಗೌಡ ಅವರು ಸುಬ್ರಾಯ ಮತ್ತು ಸೋನಿ ಎಂಬ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.