ಮನೆ ರಾಜಕೀಯ ವಕ್ಫ್ ಮಂಡಳಿ ನೋಟಿಸ್: ಕರ್ನಾಟಕ ರೈತರ ಅಹವಾಲು ಆಲಿಸಲು ಜಂಟಿ ಸಂಸದೀಯ ಸಮಿತಿಗೆ ತೇಜಸ್ವಿ ಸೂರ್ಯ...

ವಕ್ಫ್ ಮಂಡಳಿ ನೋಟಿಸ್: ಕರ್ನಾಟಕ ರೈತರ ಅಹವಾಲು ಆಲಿಸಲು ಜಂಟಿ ಸಂಸದೀಯ ಸಮಿತಿಗೆ ತೇಜಸ್ವಿ ಸೂರ್ಯ ಪತ್ರ

0

ಬೆಂಗಳೂರು: ವಕ್ಫ್ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ​​ಗೆ ಪತ್ರ ಬರೆದಿರುವ ತೇಜಸ್ವಿ ಸೂರ್ಯ, ಸಮಿತಿಯ ಮುಂದೆ ಸಾಕ್ಷಿಗಳಾಗಿ ರೈತರ ನಿಯೋಗವನ್ನು ಆಹ್ವಾನಿಸಬೇಕೆಂದು ಮನವಿ ಮಾಡಿದ್ದಾರೆ.

Join Our Whatsapp Group

ಈ ವಿಚಾರವಾಗಿ ತಾವು ಬರೆದಿರುವ ಪತ್ರ ಮತ್ತು ಅದಕ್ಕೆ ಸಂಬಂಧಿಸಿದ ವಿವರನ್ನು ತೇಜಸ್ವಿ ಸೂರ್ಯ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಹಂಚಿಕೊಂಡಿದ್ದಾರೆ.

ವಕ್ಫ್ ತಿದ್ದುಪಡಿ ಮಸೂದೆಗೆ ಸಂಬಂಧಿಸಿದ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ಜಿ ಅವರಿಗೆ ಪತ್ರ ಬರೆದು, ವಿಜಯಪುರ ಜಿಲ್ಲೆ ಮತ್ತು ಕರ್ನಾಟಕದ ಸುತ್ತಮುತ್ತಲಿನ ಇತರ ಪ್ರದೇಶಗಳ ರೈತರಿಗೆ ಅವರ ಭೂಮಿಯನ್ನು ವಕ್ಫ್ ಆಸ್ತಿ ಎಂದು ತಪ್ಪಾಗಿ ನೋಟಿಸ್ ನೀಡಿರುವುದರ ಬಗ್ಗೆ ಗಮನ ಸೆಳೆಯಲಾಗಿದೆ ಎಂದು ಎಕ್ಸ್​ ಸಂದೇಶದಲ್ಲಿ ತೇಜಸ್ವಿ ಸೂರ್ಯ ಉಲ್ಲೇಖಿಸಿದ್ದಾರೆ.

ರೈತರಿಗೆ ನೋಟಿಸ್‌ಗಳನ್ನು ನೀಡಿದ್ದರ ಹೊರತಾಗಿ, ಕಾನೂನು ಪ್ರಕ್ರಿಯೆಗಳನ್ನು ಅನುಸರಿಸದೆ ಕೆಲವು ಜಮೀನುಗಳ ಆರ್‌ಟಿಸಿ, ಪಹಣಿ ಮತ್ತು ಮ್ಯುಟೇಶನ್ ರಿಜಿಸ್ಟರ್‌ಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ. ಸಮಿತಿಯ ಮುಂದೆ ಸಾಕ್ಷಿಗಳಾಗಿ ಈ ರೈತರ ನಿಯೋಗವನ್ನು ಆಹ್ವಾನಿಸಲು ಮತ್ತು ಈ ಸಮಸ್ಯೆಯ ಪ್ರಮಾಣವನ್ನು ನೇರವಾಗಿ ಅರ್ಥಮಾಡಿಕೊಳ್ಳಲು ಮನವಿ ಮಾಡಲಾಗಿದೆ. ಅಷ್ಟೇ ಅಲ್ಲದೆ, ಸಾರ್ವಜನಿಕ ವಿಚಾರಣೆಗಾಗಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಮನವಿ ಮಾಡಲಾಗಿದೆ ಎಂದು ತೇಜಸ್ವಿ ಸೂರ್ಯ ತಿಳಿಸಿದ್ದಾರೆ.