ಮನೆ ರಾಜಕೀಯ ಮಹಾಲಕ್ಷ್ಮಿ ಲೇ ಔಟ್ ಕ್ಷೇತ್ರದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಅವಾಂತರ: ಸಂತ್ರಸ್ತರ ಮನೆಗಳಿಗೆ...

ಮಹಾಲಕ್ಷ್ಮಿ ಲೇ ಔಟ್ ಕ್ಷೇತ್ರದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಅವಾಂತರ: ಸಂತ್ರಸ್ತರ ಮನೆಗಳಿಗೆ ಸಚಿವ ಕೆ.ಗೋಪಾಲಯ್ಯ ಭೇಟಿ

0

ಬೆಂಗಳೂರು(Bengaluru): ಮಂಗಳವಾರ ಇಡೀ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಮಹಾಲಕ್ಷ್ಮಿ ಲೇ‌ಔಟ್ ವಿಧಾನಸಭಾ ಕ್ಷೇತ್ರದ ಹಲವೆಡೆ ತಗ್ಗು ಪ್ರದೇಶದ 800 ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿದೆ.

ಕಮಲಾ‌ನಗರ, ನಂದಿನಿ ಬಡಾವಣೆ, ಕಂಠೀರವ ನಗರ ಸೇರಿದಂತೆ ಲೇ ಔಟ್ ನ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ ಸುದ್ದಿ ತಿಳಿದ ಕ್ಷೇತ್ರದ ಶಾಸಕರೂ ಆದ ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರು ಮಧ್ಯರಾತ್ರಿ  ಮನೆ‌ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ತೊಂದರೆಗೆ ಸಿಲುಕಿದವರಿಗೆ ಧೈರ್ಯ ತುಂಬಿದರು.

ಮನೆಯೊಳಗೆ ನೀರು ನುಗ್ಗಿ ಆಹಾರ ಪದಾರ್ಥಗಳು, ಎಲೆಕ್ಟ್ರಾನಿಕ್ ವಸ್ತುಗಳು ಹಾಳಾಗಿದ್ದು, ಅಡಿಗೆ ಮಾಡಿಕೊಳ್ಳಲು ಜನರು ಪರಿತಪಿಸಬೇಕಾದ ಸ್ಥಿತಿ ‌ನಿರ್ಮಾಣವಾಗಿರುವುದನ್ನು ಸಚಿವರು ವೀಕ್ಷಿಸಿದರು.

ಇಂದು ಬೆಳಿಗ್ಗೆ ಮತ್ತೆ ಸಂತ್ರಸ್ತರ ಮನೆಗಳಿಗೆ ಭೇಟಿ ನೀಡಿದ ಸಚಿವರು ಎಲ್ಲ 850 ಕ್ಕೂ ಹೆಚ್ಚು ಕುಟುಂಬಗಳಿಗೆ ‌ಬೆಳಗಿನ ತಿಂಡಿ ಮತ್ತು ಮಧ್ಯಾಹ್ನದ ‌ಊಟದ ವ್ಯವಸ್ಥೆ ಕಲ್ಪಿಸಿದರು.

ಕ್ಷೇತ್ರ ವ್ಯಾಪ್ತಿಯಲ್ಲಿ ಈಗಾಗಲೇ ಕೈ ಗೊಂಡಿರುವ ಒಳಚರಂಡಿ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು‌ ತ್ವರಿತವಾಗಿ ಮುಗಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಇದೇ ವೇಳೆ ಸಚಿವರು ಸೂಚನೆ ನೀಡಿದರು.

ಮಧ್ಯರಾತ್ರಿಯೇ ಸಚಿವರು ಬಿಬಿಎಂಪಿ ಅಧಿಕಾರಿಗಳು ಮತ್ತು ಇಂಜಿನಿಯರ್ ಗಳನ್ನು ಸ್ಥಳಕ್ಕೆ ಕರೆಯಿಸಿಕೊಂಡು ಪರಿಸ್ಥಿತಿಯನ್ನು ತೋರಿಸಿದರು.