ಮನೆ ರಾಜ್ಯ ತಮಿಳುನಾಡಿಗೆ ನೀರು: ಬಿಸ್ಲೆರಿ ನೀರಿನಲ್ಲಿ ನಾಟಿ ಮಾಡುವ ಮೂಲಕ ಪ್ರತಿಭಟನೆ

ತಮಿಳುನಾಡಿಗೆ ನೀರು: ಬಿಸ್ಲೆರಿ ನೀರಿನಲ್ಲಿ ನಾಟಿ ಮಾಡುವ ಮೂಲಕ ಪ್ರತಿಭಟನೆ

0

ಶ್ರೀರಂಗಪಟ್ಟಣ: ತಮಿಳುನಾಡಿಗೆ ಕೆಆರ್‌ ಎಸ್ ಜಲಾಶಯದಿಂದ ನೀರು ಬಿಡುಗಡೆ ಹಿನ್ನೆಲೆ ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರು ಬಿಸ್ಲೆರಿ ನೀರಿನಲ್ಲಿ ನಾಟಿ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ರೈತರ ಬೆಳೆಗಳಿಗೆ ನೀರು ಕೊಡುತ್ತಿಲ್ಲ, ತಮಿಳುನಾಡಿಗೆ ನೀರು ಹರಿಸುತ್ತಿದ್ದಾರೆ ಎಂದು ಆಕ್ರೋಶತರಾದ ರೈತರು, ಕಾರ್ಯಕರ್ತರು ಹನುಮಂತಪುರ ಗ್ರಾಮದ ಗದ್ದೆಯಲ್ಲಿ ನಾಟಿ ಮಾಡಿ ಆಕ್ರೋಶ  ವ್ಯಕ್ತಪಡಿಸಿದರು.

ಕಾವೇರಿ ನೀರು ಇಲ್ಲದೆ ಭತ್ತದ ನಾಟಿ ಮಾಡಲು ಆಗುತ್ತಿಲ್ಲ, ಬಿಸ್ಲೆರಿ ನೀರಿನಲ್ಲಿ ನಾಟಿ ಮಾಡುವ ಪರಿಸ್ಥಿತಿ ಬಂದಿದೆ ಎಂದು ಹೇಳಿ ಕೂಡಲೇ ನೀರು ನಿಲ್ಲಿಸಿ ರಾಜ್ಯ ಕಾಪಾಡಬೇಕು ಎಂದು ಆಗ್ರಹಿಸಿದರು.

ರೈತರ ಸಂಕಷ್ಟಕ್ಕೆ ಸ್ಪಂದಿಸದ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿ ಗ್ರಾಮದ ರಾಮಚಂದ್ರು ಎಂಬವರ ಜಮೀನಿನಲ್ಲಿ ನಾಟಿ ಮಾಡುವ ಮೂಲಕ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ  ಭತ್ತದ ನಾಟಿ ಮಾಡಿ, ಬಿಸ್ಲೇರಿ ನೀರೆರೆದು ಪ್ರತಿಭಟನೆ ನಡೆಸಿದರು.

ಹಿಂದಿನ ಲೇಖನಮಂಗಳೂರು: ತಡರಾತ್ರಿ ವಿಹಾರಕ್ಕೆಂದು ಬಂದು ಸಮುದ್ರ ಪಾಲಾದ ವೈದ್ಯ
ಮುಂದಿನ ಲೇಖನಧಾರವಾಡ: ಸರ್ಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ