ಮೈಸೂರು: ನಮ್ಮ ಸರ್ಕಾರ ಮಾತ್ರ ತಮಿಳುನಾಡಿಗೆ ನೀರು ಬಿಟ್ಟಿಲ್ಲ. ಎಲ್ಲಾ ಸರ್ಕಾರಗಳ ಅವಧಿಯಲ್ಲೂ ನೀರು ಬಿಡಲಾಗಿದೆ ಎಂದು ಶಾಸಕ ತನ್ವಿರ್ ಸೇಠ್ ತಿರುಗೇಟು ತಿಳಿಸಿದ್ದಾರೆ.
ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಪ್ರಾಧಿಕಾರದ ನಿರ್ದೇಶನದಂತೆ ನಡೆದುಕೊಳ್ಳಬೇಕಿದೆ. ಹಾಗಾಗಿ ರಾಜ್ಯದಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲಾಗಿದೆ ಎಂದಿದ್ದಾರೆ.
ಆಗಸ್ಟ್ 23ರಂದು ಸರ್ವ ಪಕ್ಷಗಳ ಸಭೆ ನಡೆಯಲಿದೆ. ಸಭೆಯಲ್ಲಿ ಮುಂದೇನು ಮಾಡಬೇಕೆಂದು ತೀರ್ಮಾನಿಸಲಾಗುತ್ತದೆ. ಕಾವೇರಿ ವಿಚಾರ ಮುಂದಿಟ್ಟುಕೊಂಡು ರಾಜಕೀಯ ಬೇಳೆ ಬೇಯಿಸಿಕೊಳ್ಳಬಾರದು. ಸರ್ವ ಪಕ್ಷಗಳ ಸಭೆಗೆ ಆಹ್ವಾನ ಬಂದ್ರೆ ಹೋಗುತ್ತೇನೆ ಎಂದರು.
ಕಾಂಗ್ರೆಸ್’ಗೆ ಆಪರೇಷನ್ ಹಸ್ತದ ಅವಶ್ಯಕತೆ ಇಲ್ಲ
ರಾಜ್ಯದಲ್ಲಿ ಆಪರೇಷನ್ ಹಸ್ತ ಮುನ್ನಲೆಗೆ ಬಂದಿದ್ದು, ಈ ಕುರಿತು ಪ್ರತಿಕ್ರಿಯಿಸಿದ ಶಾಸಕ ತನ್ವಿರ್ ಸೇಠ್, ಕಾಂಗ್ರೆಸ್’ಗೆ ಆಪರೇಷನ್ ಹಸ್ತದ ಅವಶ್ಯಕತೆ ಇಲ್ಲ. ಜನತೆ ನಮಗೆ 135ಸ್ಥಾನ ಕೊಟ್ಟು ಸಂಪೂರ್ಣ ಬಹುಮತ ನೀಡಿದ್ದಾರೆ. ಈ ಸಂದರ್ಭದಲ್ಲಿ ಆಪರೇಷನ್ ಹಸ್ತದ ಅವಶ್ಯಕತೆಯಿಲ್ಲ. ಪಕ್ಷಾಂತರ ನಿಷೇಧ ಕಾಯ್ದೆ ಪರಿಣಾಮಕಾರಿಯಾಗಿದೆ. ಹೀಗಿದ್ರು ರಾಜೀನಾಮೆ ನೀಡಿ ಜನರ ಬಳಿ ಹೋಗೋದು ಎಷ್ಟರ ಮಟ್ಟಿಗೆ ಸರಿ. ಆಪರೇಷನ್ ಕಮಲ ಅನ್ನೋದನ್ನ ತಂದಿದ್ದೆ ಬಿಜೆಪಿಯವರು. ಈ ವಿಚಾರಕ್ಕೆ ಹೆಚ್ಚಿನ ಮನ್ನಣೆ ನೀಡಲ್ಲ ಎಂದರು.