ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡಿರುವ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ರಸ್ತೆಯಲ್ಲಿ ನೀರು ಕಟ್ಟಿಕೊಂಡು ಸಂಚಾರಕ್ಕೆ ತೊಡಕಾಗಿ ಪರಿಣಮಿಸಿದ್ದು, ಇದನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಖಂಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಬೆಂಗಳೂರು-ಮೈಸೂರು ದಶಪಥ ರಸ್ತೆ ಕ್ರೆಡಿಟ್ ತೆಗೆದುಕೊಳ್ಳುತ್ತಿರುವ ಪುಣ್ಯಾತ್ಮರೆಲ್ಲ ಹೆದ್ದಾರಿಯು ಜಲಾವೃತವಾಗಿರುವ ಬಗ್ಗೆ ಮಾತನಾಡಬೇಕು. ದುಬಾರಿ ಟೋಲ್ ಮಾತ್ರ ಬೇಕು ಆದರೆ ಅದಕ್ಕೆ ತಕ್ಕ ಸೇವೆ ಒದಗಿಸುವುದು ಸಾಧ್ಯವಿಲ್ಲ. ಪ್ರಯಾಣಿಕರ ಜೀವವನ್ನು ಬಿಜೆಪಿಯ 40% ವ್ಯವಹಾರ ಪಣಕ್ಕಿಟ್ಟಿದೆ. ಭ್ರಷ್ಟಾಚಾರ ಬಿಟ್ಟರೆ ನಿಮ್ಮ ಕೊಡುಗೆ ಏನಿದೆ? ಎಂದು ಪ್ರಶ್ನೆ ಮಾಡಿದ್ದಾರೆ.