ಮನೆ ರಾಜ್ಯ ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ನೀರು: ಪ್ರಾಧಿಕಾರ ಸರಿ ಮಾಡಲಿದೆ ಎಂದ ಸಿಎಂ

ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ನೀರು: ಪ್ರಾಧಿಕಾರ ಸರಿ ಮಾಡಲಿದೆ ಎಂದ ಸಿಎಂ

0

ಚಾಮರಾಜನಗರ: ರಾಮನಗರದ ಬಳಿ ಮೈಸೂರು- ಬೆಂಗಳೂರು ಹೆದ್ದಾರಿಯ ಅಂಡರ್ ಪಾಸ್ ನಲ್ಲಿ ಮಳೆ ನೀರು ನಿಂತು ಉಂಟಾಗಿರುವ ಸಮಸ್ಯೆ ಕುರಿತು ಇಂದು ಪ್ರತಿಕ್ರಿಯಿಸಿರುವ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸರಿ ಮಾಡಲಿದೆ ಎಂದು ಹೇಳಿದರು.

ಮಹದೇಶ್ವರ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ಬಂದಾಗ ಸಣ್ಣ ಪುಟ್ಟ ಸಮಸ್ಯೆಗಳಾಗುವುದು ಸಹಜ. ಪ್ರಾಧಿಕಾರ ಅದನ್ನು ಸರಿ ಪಡಿಸಲಿದೆ ಎಂದರು.

ಎನ್ ಎಚ್ ಎಂ (ರಾಷ್ಟ್ರೀಯ ಆರೋಗ್ಯ ಯೋಜನೆ) ನೌಕರರ ಮುಷ್ಕರದ ಬಗ್ಗೆ ‌ಕೇಳಿದ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ, ನೌಕರರಿಗೆ ಸೇವಾ ಷರತ್ತುಗಳಿರುತ್ತವೆ. ಅವರಿಗೆ ವೇತನ ಹೆಚ್ಚಳ ಮಾಡಬೇಕು ಎಂಬುದು ನಮ್ಮ ಉದ್ದೇಶ. ಅಧಿಕಾರಿಗಳಿಗೆ ತಿಳಿಸಿದ್ದೇನೆ. ಒಂದೆರಡು ದಿನದಲ್ಲಿ ಸಭೆ ಮಾಡಿ ತೀರ್ಮಾನ ಮಾಡುತ್ತೇವೆ ಎಂದರು.

ಮಹದೇಶ್ವರ ಸ್ವಾಮಿ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಬಿಜೆಪಿ ಸಂಸದೀಯ‌ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಗೈರಾಗಿರುವ ಬಗ್ಗೆ ಕೇಳಿದ್ದಕ್ಕೆ, ಅವರು ಬೇರೆ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಾಗಿರುವುದರಿಂದ ಇಲ್ಲಿಗೆ ಬಂದಿಲ್ಲ ಎಂದು ಪ್ರತಿಕ್ರಿಯಿಸಿದರು.

ಹಿಂದಿನ ಲೇಖನ108 ಅಡಿ ಎತ್ತರದ ಮಹದೇಶ್ವರಸ್ವಾಮಿ ಪ್ರತಿಮೆ ಅನಾವರಣ ಮಾಡಿದ ಸಿಎಂ ಬೊಮ್ಮಾಯಿ
ಮುಂದಿನ ಲೇಖನಕೆಎಂಎಫ್‌ ನೇಮಕಾತಿಯಲ್ಲಿ ಅಕ್ರಮ: ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸದಂತೆ ಹೈಕೋರ್ಟ್‌ ತಡೆಯಾಜ್ಞೆ