ಮನೆ ಸುದ್ದಿ ಜಾಲ ಕೆಆರ್‌ ಎಸ್‌ ಜಲಾಶಯದಿಂದ ನೀರು ಬಿಡುಗಡೆ: ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ

ಕೆಆರ್‌ ಎಸ್‌ ಜಲಾಶಯದಿಂದ ನೀರು ಬಿಡುಗಡೆ: ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ

0

ಮೈಸೂರು (Mysuru): ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜಸಾಗರ ಜಲಾಶಯದಿಂದ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತಿರುವುದರಿಂದ ನದಿಯ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವವರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ.

ಮಳೆಯಿಂದಾಗಿ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದ್ದು, ಕೃಷ್ಣರಾಜನಗರ ಜಲಾಶಯದಿಂದ ಸುಮಾರು 25,000 ರಿಂದ 75,000 ಕ್ಯೂಸೆಕ್ಸ್‌ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು. ಈ ಪ್ರಮಾಣವು ಹೆಚ್ಚಾಗುವ ಸಂಭವವಿರುತ್ತದೆ. ಆದ್ದರಿಂದ ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿ ಇರುವ ಮತ್ತು ನದಿಯ ಎರಡೂ ದಂಡೆಗಳಲ್ಲಿ ವಾಸವಿರುವವರು ತಮ್ಮ ಆಸ್ತಿ, ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಹೋಗಲು ಕಾವೇರಿ ನೀರಾವರಿ ನಿಗಮದ ಕೃಷ್ಣರಾಜ ಸಾಗರ ವಿಭಾಗದ ಕಾರ್ಯಪಾಲಕ ಇಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದಿನ ಲೇಖನಜು.12 ರಂದು ಸೆಟ್ಟೇರಲಿದೆ ನಟ ಶಿವರಾಜ್‌ ಕುಮಾರ್‌ ಹೊಸ ಚಿತ್ರ
ಮುಂದಿನ ಲೇಖನಶಿವ ತಾಂಡವ ಸ್ತೋತ್ರ ಪಠಿಸಿ ಆತನ ಕೃಪೆಗೆ ಪಾತ್ರರಾಗಿ