ಬೆಂಗಳೂರು : ಕಾವೇರಿ ನೀರಿನ ಪೈಪ್‌ಲೈನ್ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಆಗಲಿದೆ.
ಬೆಂಗಳೂರು ನೀರಿನ ಸರಬರಾಜು ಮತ್ತು ಒಳಚರಂಡಿ ಮಂಡಳಿಯ (ಬಿಡಬ್ಲ್ಯೂಎಸ್‌ಎಸ್‌ಬಿ) ವತಿಯಿಂದ ನಗರದ ನಾಗರಬಾವಿ ಬಿಡಿಎ ಕಾಂಪ್ಲೆಕ್ಸ್ ಪ್ರದೇಶದ 600 ಮಿಮೀ ವ್ಯಾಸದ ಮುಖ್ಯ ಕಾವೇರಿ ನೀರಿನ ಪೈಪ್‌ಲೈನ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೆ.19 ರಿಂದ 21ರ ವರೆಗೆ ನಗರದ ಕೆಲವು ಭಾಗಗಳಲ್ಲಿ ಕಾವೇರಿ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವ್ಯತ್ಯಯ? – ವಿಜಯನಗರ, ಬನವಾಸಿ ರಸ್ತೆ, ಕೋರಮಂಗಲ, ಗಾಂಧಿನಗರ ಸುತ್ತಮುತ್ತಲಿನ ಪ್ರದೇಶಗಳು, ಬಿ.ಡಿ.ಎ. ಕಾಂಪ್ಲೆಕ್ಸ್ ಸುತ್ತಮುತ್ತ ಹಾಗೂ ಇತರ ಹತ್ತಿರದ ಬಡಾವಣೆಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ತುರ್ತು ಕಾರಣದಿಂದ ನಡೆಯುತ್ತಿರುವ ಕಾಮಗಾರಿಯಲ್ಲಿ ಸಾರ್ವಜನಿಕರು ಸಹಕಾರ ನೀಡುವಂತೆ ಹಾಗೂ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಬಿಡಬ್ಲ್ಯೂಎಸ್‌ಎಸ್‌ಬಿ ಮನವಿ ಮಾಡಿದೆ.














