ಮಂಡ್ಯ: ಮಂಡ್ಯ ನಗರ ನೀರು ಸರಬರಾಜು ವ್ಯವಸ್ಥೆ ನಿರ್ವಹಣೆಯಡಿ ಶ್ರೀರಂಗಪಟ್ಟಣ ಸಮೀಪವಿರುವ ಮೂಲಸ್ಥಾವರಕ್ಕೆ ವಿದ್ಯುತ್ ಸರಬರಾಜು ಮಾಡುವ ಶ್ರೀರಂಗಪಟ್ಟಣ ತಾಲ್ಲೂಕು ವ್ಯಾಪ್ತಿಗೆ ಸೇರಿದ 66/11 ಕೆವಿ ವಿದ್ಯುತ್ ಉಪ ವಿತರಣಾ ಕೇಂದ್ರದ ನಿರ್ವಹಣಾ ಕಾಮಗಾರಿಯನ್ನು ಸೆಸ್ಕ್ ವತಿಯಿಂದ ಜೂನ್ 4 ರಂದು ಹಮ್ಮಿಕೊಳ್ಳಲಾಗಿದೆ.
ಸದರಿ ದಿನದಂದು ಮಂಡ್ಯ ನಗರಕ್ಕೆ ನೀರನ್ನು ಪಂಪು ಮಾಡಲು ಸಾಧ್ಯವಾಗುವುದಿಲ್ಲ. ಪ್ರಯುಕ್ತ, ಮಂಡ್ಯ ನಗರ ಸಾರ್ವಜನಿಕರಿಗೆ ಜೂನ್ 4 ಮತ್ತು 5 ರಂದು ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನೀರು ಬಂದ ವೇಳೆ ಶೇಖರಿಸಿಟ್ಟುಕೊಳ್ಳಿ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮಂಡ್ಯ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















