ಮನೆ ರಾಜ್ಯ ನಾವು ಅಪರೇಷನ್ ಹಸ್ತ ಮಾಡುತ್ತಿಲ್ಲ. ಅವರಾಗಿಯೇ ಪಕ್ಷಕ್ಕೆ ಬರುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ನಾವು ಅಪರೇಷನ್ ಹಸ್ತ ಮಾಡುತ್ತಿಲ್ಲ. ಅವರಾಗಿಯೇ ಪಕ್ಷಕ್ಕೆ ಬರುತ್ತಿದ್ದಾರೆ: ಡಿ.ಕೆ.ಶಿವಕುಮಾರ್

0

ಮೈಸೂರು: ನಾವು ಅಪರೇಷನ್ ಹಸ್ತ ಮಾಡುತ್ತಿಲ್ಲ. ಅವರಾಗಿಯೇ ಪಕ್ಷಕ್ಕೆ ಬರುತ್ತೇನೆ ಎಂದು ಹೇಳುತ್ತಿದ್ದಾರೆ. ಬರುವವರಿಗೆ ಸ್ವಾಗತ ಕೋರುತ್ತಿದ್ದೇವೆ. ನಾವಾಗಿಯೇ ನಾವು ಯಾರನ್ನು ಪಕ್ಷಕ್ಕೆ ಕರೆತರುವ ಪ್ರಯತ್ನ ಮಾಡುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವರ ಭವಿಷ್ಯ, ನಮ್ಮ ಪಕ್ಷದ ವರ್ಚಸ್ಸು ಎಲ್ಲದನ್ನೂ ಗಮನಿಸಿಕೊಂಡು ಅವರೇ ನಿರ್ಧಾರ ಮಾಡತ್ತಿದ್ದಾರೆ. ಎಷ್ಟು ಜನ ಬರುತ್ತಾರೆ ಎಂಬುದನ್ನು ಈಗಲೇ ನಾನು ಹೇಳಲು ಸಾಧ್ಯವಿಲ್ಲ. ಎಲ್ಲದಕ್ಕೂ ಕಾಲ, ಸಮಯ ಘಳಿಗೆ ಎಂಬುದು ಇರುತ್ತದೆ. ಆ ಘಳಿಗೆ ಬಂದಾಗ ಎಲ್ಲವೂ ನಡೆಯುತ್ತದೆ ಎಂದು ಹೇಳಿದರು.

ಜೆಡಿಎಸ್ ಶಾಸಕರನ್ನು ಕಾಂಗ್ರೆಸ್ ಸೆಳೆಯುವ ಪ್ರಯತ್ನ ಆಗಿದೆ ಎಂಬ ವಿಚಾರ ಕುರಿತು ಮಾತನಾಡಿ, ಇಂತಹ ಮಾತುಗಳನ್ನ ನಾನು ಹೇಳುತ್ತ ಹೋದರೆ ಅದು ದೊಡ್ಡ ಪಟ್ಟಿ ಆಗುತ್ತೆ. ಈಗ ಅದರ ಬಗ್ಗೆ ಚರ್ಚೆ ಬೇಡ ಎಂದರು.

ಗೃಹ ಲಕ್ಷ್ಮೀ ಕಾರ್ಯಕ್ರಮ ಬೆಳಗಾವಿಯಿಂದ ಮೈಸೂರಿಗೆ ಶಿಫ್ಟ್ ಆದ ಕುರಿತು ಮಾತನಾಡಿ, ಈ ವಿಚಾರದಲ್ಲಿ ಯಾವ ರಾಜಕೀಯವೂ ಇಲ್ಲ. ಬೆಳಗಾವಿಯಲ್ಲಿ ಮುಂದೆ ಇನ್ನೊಂದು ಕಾರ್ಯಕ್ರಮ ಮಾಡಲು ಪ್ಲಾನ್ ಮಾಡುತ್ತಿದ್ದೇವೆ. ಎಲ್ಲರ ಒಮ್ಮತದ ತೀರ್ಮಾನದಿಂದ ಮೈಸೂರಿನಲ್ಲಿ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದರು.

ಬೆಳಗಾವಿಯಲ್ಲಿ ನಾವು ಎರಡು ಲೋಕಸಭಾ ಕ್ಷೇತ್ರ ಗೆಲ್ಲುತ್ತೇವೆ‌. ಮೈಸೂರಿನಲ್ಲಿ ಅನ್ನ ಭಾಗ್ಯ ಮಾಡುವ ಪ್ಲಾನ ಇತ್ತು. ಅಕ್ಕಿ ವಿಚಾರದಲ್ಲಿ ಒಂದಷ್ಟು ಅಡೆತಡೆ ಇದೆ. ಹೀಗಾಗಿ ಗೃಹ ಲಕ್ಷ್ಮೀಯನ್ನ ಇಲ್ಲಿಂದ ಆರಂಭಿಸುತ್ತಿದ್ದೇವೆ.  ಬೆಂಗಳೂರಿನಲ್ಲೂ ಕಾರ್ಯಕ್ರಮ ಮಾಡುವ ಯೋಚನೆ ಮಾಡಿದ್ದೇವೆ. ಆದರೆ ಟ್ರಾಫಿಕ್ ಸಮಸ್ಯೆ ಉಂಟಾಗುತ್ತದೆ ಉಂಟಾಗುತ್ತವೆ ಎಂದು ಮೈಸೂರಿಗೆ ಶಿಫ್ಟ್ ಮಾಡಿದ್ದೇವೆ ಎಂದು ತಿಳಿಸಿದರು.

ಆ.30 ರಂದು ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಹಣ ಸಂದಾಯ

ಆಗಸ್ಟ್ 30 ರಂದು ಒಂದು ಬಟನ್ ಅದುಮಿದ ಕೂಡಲೇ ಎಲ್ಲಾ ಗೃಹಲಕ್ಷ್ಮಿ ಯೋಜನೆ  ಫಲಾನುಭವಿಗಳಿಗೆ ಹಣ ಸಂದಾಯವಾಗುತ್ತದೆ. ಅದರ ಮೇಸೆಜ್ ಗಳು ಅವರ ಮೊಬೈಲ್ ನಂಬರ್ ಗಳಿಗೆ ಬರುತ್ತದೆ. ನಮ್ಮಲ್ಲಿ ಹಣದ ಕೊರತೆ ಇಲ್ಲ. ಎಲ್ಲಾ ಹಣವನ್ನ ಬ್ಯಾಂಕ್ ಗೆ ಡೆಪಾಸಿಟ್ ಮಾಡಿದ್ದೇವೆ‌. ಸರ್ವರ್ ಸಮಸ್ಯೆ ಆದರೆ ಒಂದಿಷ್ಟು ಜನರಿಗೆ ಹಣ ಬರುವುದು ತಡವಾಗಬಹುದು ಅಷ್ಟೇ ಎಂದು ಹೇಳಿದರು.

ಹಿಂದಿನ ಲೇಖನಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರ ಮೇಲೆ ಕಾಡು ಹಂದಿ ದಾಳಿ: ಇಬ್ಬರಿಗೆ ಗಂಭೀರ ಗಾಯ
ಮುಂದಿನ ಲೇಖನಭಾರತೀಯ ಕುಸ್ತಿ ಮಂಡಳಿಯನ್ನು ಅಮಾನತುಗೊಳಿಸಿದ ಯುಡಬ್ಲ್ಯುಡಬ್ಲ್ಯು