ಮನೆ ಸ್ಥಳೀಯ ನಾವು ಒಟ್ಟಾಗಿದ್ದೇವೆ, ಸರ್ಕಾರ ಬಂಡೆಯಂತೆ ಭದ್ರ : ಸಿಎಂ ಸಿದ್ದರಾಮಯ್ಯ

ನಾವು ಒಟ್ಟಾಗಿದ್ದೇವೆ, ಸರ್ಕಾರ ಬಂಡೆಯಂತೆ ಭದ್ರ : ಸಿಎಂ ಸಿದ್ದರಾಮಯ್ಯ

0

ಮೈಸೂರು: ನಾನು ಹಾಗೂ ಉಪಮುಖ್ಯಮಂತ್ರಿ  ಡಿ.ಕೆ.ಶಿವಕುಮಾರ್ ಇಬ್ಬರೂ ಒಟ್ಟಾಗಿದ್ದೇವೆ,  ಯಾರೂ ಏನೇ ಹೇಳಿದರೂ ನಮ್ಮ ಮಧ್ಯೆ ಭಿನ್ನಾಭಿಪ್ರಾಗಳಿಲ್ಲ. ನಮ್ಮ ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಡಿ.ಕೆ.ಶಿವಕುಮಾರ್ ಅವರ ಕೈ ಹಿಡಿದು ಒಗ್ಗಟ್ಟು ಪ್ರದರ್ಶಿಸಿದರು.

ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕಾರ್ಯದರ್ಶಿ  ಸುರ್ಜೆವಾಲಾ ಅವರು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಬಗ್ಗೆ ಮಾತನಾಡಿ ಅವರು ಅಭಿಪ್ರಾಯ ಕೇಳಿ, ಅವರ ಕೆಲಸವನ್ನು ಮಾಡುತ್ತಾರೆ ಎಂದರು.

ಸಿದ್ದರಾಮಯ್ಯ ಅವರು ಈ ಬಾರಿಯ ದಸರಾ ಉದ್ಘಾಟಿಸುವುದಿಲ್ಲ ಎಂದು  ಬಿಜೆಪಿಯವರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಶ್ರೀರಾಮುಲು ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಾರೆ. ಅವರು ಹೇಗೆ ಭವಿಷ್ಯ ನುಡಿಯುತ್ತಾರೆ  ಎಂದು ಪ್ರಶ್ನಿಸಿದರು.