ಮನೆ ಸುದ್ದಿ ಜಾಲ ಸಾರ್ವಜನಿಕರ ಸಂಕಷ್ಟಕ್ಕೆ ಸದಾ ಸ್ಪಂದಿಸಿದ್ದೇವೆ: ಎನ್ ಚಲುವರಾಯಸ್ವಾಮಿ.

ಸಾರ್ವಜನಿಕರ ಸಂಕಷ್ಟಕ್ಕೆ ಸದಾ ಸ್ಪಂದಿಸಿದ್ದೇವೆ: ಎನ್ ಚಲುವರಾಯಸ್ವಾಮಿ.

0

ಮಂಡ್ಯ: ಸರ್ಕಾರವು ಸದಾ ಸಾರ್ವಜನಿಕರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸದಲ್ಲಿ ನಿರತವಾಗಿದೆ. ಆದರೆ ಅದನ್ನು ಪ್ರಚಾರ ಮಾಡುವ ಕೆಲಸದಲ್ಲಿ ಹಿಂದುಳಿದಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.

ಅವರು ಇಂದು ಕೆ.ಆರ್.ಎಸ್. ಜಲಾಶಯಕ್ಕೆ ಮಾನ್ಯ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳೊAದಿಗೆ ಬಾಗಿನ ಅರ್ಪಿಸಿ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಪಂಚ ಗ್ಯಾರಂಟಿಗಳನ್ನು ಸರ್ಕಾರ ಘೋಷಿಸಿದ ಸಂದರ್ಭದಲ್ಲಿ ವಿಪಕ್ಷಗಳು ಆರ್ಥಿಕ ಸ್ಥಿತಿಗತಿ ತಿಳಿಯದೆ ಸರ್ಕಾರ ಗ್ಯಾರಂಟಿ ಘೋಷಿಸಿದೆ ಅಭಿವೃದ್ಧಿ ಕಾಮಗಾರಿಗಳನ್ನು ಮಾಡುವುದು ಕಷ್ಟ ಬೊಕ್ಕಸಕ್ಕೆ ನಷ್ಟವಾಗುತ್ತದೆ ಎಂದು ಟೀಕೆ ವ್ಯಕ್ತಪಡಿಸಿದರು.ಆದರೆ ಇಂದು ಪಂಚ ಗ್ಯಾರಂಟಿಗಳಿAದ ಸರ್ಕಾರದ ಬೊಕ್ಕಸಕ್ಕೆ ಯಾವುದೇ ತೊಂದರೆ ಉಂಟಾಗದAತೆ ಪಂಚ ಗ್ಯಾರಂಟಿಗಳು ಯಶಸ್ವಿಯಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನವರ 16 ವರ್ಷಗಳ ಆಯವ್ಯಯ ಮಂಡನೆಯ ಅನುಭವದೊಂದಿಗೆ ಗ್ಯಾರಂಟಿ ಯೋಜನೆಗಳ ಯಶಸ್ವಿ ಕಂಡಿದೆ ಎಂದರು.

 ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಅಧಿಕಾರಕ್ಕೆ ಬಂದಾಗ ರಾಜ್ಯ ಬರಗಾಲ ಪೀಡಿತವಾಗುತ್ತದೆ ಎಂದು ವಿಪಕ್ಷಗಳು ಟೀಕಿಸುತ್ತಾ ಬರುತ್ತಿದ್ದವು ಆದರೆ ಇಂದು ಇದೆ ಸಿದ್ದರಾಮಯ್ಯ ನವರು ಆಡಳಿತಾವಧಿಯಲ್ಲಿ ರಾಜ್ಯದ ಎಲ್ಲಾ ಜಲಾಶಯಗಳು ಭರ್ತಿಯಾಗಿ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ ಎಂದು ತಿಳಿಸಿದರು.

 93 ವರ್ಷಗಳ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಜೂನ್ ಮಾಹೆಯಲ್ಲಿ ಕೆ.ಆರ್.ಎಸ್ ಜಲಾಶಯ ಭರ್ತಿಯಾಗಿದೆ, ಇದು ಸಂತಸದ ವಿಷಯವಾಗಿದೆ. ಕೆ.ಆರ್.ಎಸ್ ನೊಂದಿಗೆ ಎಲ್ಲಾ ಜಲಾಶಯಗಳು ಭರ್ತಿಯಾಗಿದೆ. ಕೃಷಿ ಚಟುವಟಿಕೆಗಳು ಗರಿಗೆದರಿದೆ. ಇದು ಸಂತೋಷದ ವಿಷಯವಾಗಿದೆ ಎಂದರು.

ಕೃಷಿ ಪ್ರಧಾನ ಜಿಲ್ಲೆಯಾದ ಮಂಡ್ಯ ಜಿಲ್ಲೆಗೆ ಕೃಷಿ ವಿಶ್ವವಿದ್ಯಾನಿಲಯವನ್ನು ಸರ್ಕಾರ ನೀಡಿದೆ ಹಾಗೂ ಆದಿಚುಂಚನಗಿರಿಯಲ್ಲಿ ಖಾಸಗಿ ಕೃಷಿ ಕಾಲೇಜು ಪ್ರರಂಭಿಸಲು ಅನುಮತಿ ನೀಡಲಾಗಿದೆ ಎಂದರು.

ಶಾಸಕರಾದ ರಮೇಶ್ ಬಂಡಿಸಿದ್ದೇಗೌಡ ಅವರು ಮಾತನಾಡಿ ಈ ದಿನ ರಾಜ್ಯದ ಇತಿಹಾಸದಲ್ಲಿ ಸುವರ್ಣ ಅಕ್ಷರದಲ್ಲಿ ಬರೆದಿಡುವ ದಿನವಾಗಿದೆ. ಇದೇ ಮೊದಲ ಬಾರಿಗೆ ಜೂನ್ ಮಾಹೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳು ಬಾಗಿನ ಅರ್ಪಿಸಿದ್ದಾರೆ ಎಂದರು.

 ಈ ಬಾರಿ ಮೆಟ್ಟೂರು ಅಣೆಕಟ್ಟು ಸಹ ಭರ್ತಿಯಾಗುವುದರಿಂದ ಬಹಳಷ್ಟು ಸಮಸ್ಯೆಗಳು ಪರಿಹಾರವಾಗಿದೆ. ರಾಜ್ಯದ ಅಣೆಕಟ್ಟುಗಳು ಸಹ ಭರ್ತಿಯಾಗಿ ರಾಜ್ಯದ ಜನರು ಹಾಗೂ ರೈತರಲ್ಲಿ ಮಂದಹಾಸ ಮೂಡಿಸಿದೆ ಎಂದರು.

ಶ್ರೀರAಗಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ನೀರಾವರಿ ಕೆಲಸಗಳ ಅಭಿವೃದ್ಧಿಗಾಗಿ
150 ಕೋಟಿ ರೂ ಮಂಜೂರಾತಿ ನೀಡಲಾಗಿದೆ. ಆರ್ಥಿಕ ಇಲಾಖೆಯಲ್ಲೂ ಮಂಜೂರಾತಿ ಕೊಡಿಸಿಕೊಡಬೇಕಾಗಿ ಕೋರಿದರು.

ಜಿಲ್ಲೆಯಲ್ಲಿ ಸಿ.ಡಿ.ಎಸ್, ರಾಮಸ್ವಾಮಿ ಹಾಗೂ ಇತರೆ ನಾಲೆಗಳನ್ನು ಈಗಾಗಲೇ ಅಭಿವೃದ್ಧಿ ಪಡಿಸಲಾಗಿದೆ. ಇದಕ್ಕೆ ಹೊಂದಿಕೊAಡಿರುವ
ಉಪನಾಲೆಗಳನ್ನು ಅಭಿವೃದ್ಧಿ ಪಡಿಸಿಕೊಡಬೇಕಾಗಿ ಮನವಿ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವ ಡಾ:ಹೆಚ್.ಸಿ ಮಹದೇವಪ್ಪ, ರೇಷ್ಮೆ ಸಚಿವ ಕೆ.ವೆಂಕಟೇಶ್, ಸಣ್ಣ ನೀರವಾರಿ ಸಚಿವ ಬೋಸ್ ರಾಜ್, ವಿಧಾನಸಭಾ ಶಾಸಕರಾದ ತನ್ವೀರ್ ಸೇಠ್, ಪುಟ್ಟರಂಗ ಶೆಟ್ಟಿ, ಉದಯ್ ಕೆ.ಎಂ, ಪಿ.ರವಿಕುಮಾರ್, ಹರೀಶ್ ಗೌಡ, ಎ.ಆರ್.ಕೃಷ್ಣ ಮೂರ್ತಿ, ವಿಧಾನ ಪರಿಷತ್ ಶಾಸಕರಾದ ಮಧು.ಜಿ.ಮಾದೇಗೌಡ, ದಿನೇಶ್ ಗೂಳಿಗೌಡ, ಡಾ: ತಿಮ್ಮಯ್ಯ,, ವಿವೇಕನಂದ, ಸಂಸದರಾದ ಸುನೀಲ್ ಬೋಸ್, ಜಿಲ್ಲಾಧಿಕಾರಿ ಡಾ: ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್. ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಉಪಸ್ಥಿತರಿದ್ದರು.