ಮನೆ ರಾಜಕೀಯ ಎಲ್ಲರ ಅಭಿಪ್ರಾಯ ಪಡೆದು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ.ಇಬ್ರಾಹಿಂ ಉಚ್ಚಾಟಿಸಿದ್ದೇವೆ: ಹೆಚ್.ಡಿ. ದೇವೇಗೌಡ

ಎಲ್ಲರ ಅಭಿಪ್ರಾಯ ಪಡೆದು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ.ಇಬ್ರಾಹಿಂ ಉಚ್ಚಾಟಿಸಿದ್ದೇವೆ: ಹೆಚ್.ಡಿ. ದೇವೇಗೌಡ

0

ಬೆಂಗಳೂರು: ಹಿಂದಿನ ಅಧ್ಯಕ್ಷರ ಹೇಳಿಕೆಯನ್ನು ನಾನು ಪ್ರಸ್ತಾಪ ಮಾಡುವುದಿಲ್ಲ. ಜೆಡಿಎಸ್ ಕೋರ್ ಕಮಿಟಿ ಸದಸ್ಯರ ಸಭೆ ಕರೆದು ಚರ್ಚೆ ನಡೆಸಿದ್ದೇವೆ, ಎಲ್ಲರ ಅಭಿಪ್ರಾಯ ಪಡೆದು ಸಿ.ಎಂ.ಇಬ್ರಾಹಿಂ ಉಚ್ಚಾಟಿಸಿದ್ದೇವೆ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಸ್ಪಷ್ಟಪಡಿಸಿದರು.

ನಮ್ಮದೇ ಒರಿಜಿನಲ್ ಜೆಡಿಎಸ್, ಬಿಜೆಪಿಗೆ ಬೆಂಬಲ ಇಲ್ಲ ಎಂದು ಸ್ವಪಪಕ್ಷದ ವರಿಷ್ಠರ ವಿರುದ್ಧವೇ ಗುಡುಗಿದ್ದ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.

ಇಂದು (ಅ. 19)  ಬೆಂಗಳುರಿನ ಜೆಪಿ ಭವನದಲ್ಲಿ ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಈ ಕುರಿತು ಹೆಚ್.ಡಿ.ದೇವೇಗೌಡರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿದೆ.

ನಮ್ಮದೇ ಒರಿಜಿನಲ್ ಜೆಡಿಎಸ್. ನಾನೇ ಪಕ್ಷದ ರಾಜ್ಯಾಧ್ಯಕ್ಷ ನಾನ್ಯಾಕೆ ಪಕ್ಷ ಬಿಟ್ಟು ಹೋಗಲಿ ಎಂದು ಸಿ.ಎಂ.ಇಬ್ರಾಹಿಂ ಗುಡುಗಿದ್ದರು. ಇಬ್ರಾಹಿಂ ಮಾತಿಗೆ ದೇವೇಗೌಡ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಇತರೆ ಜೆಡಿಎಸ್ ನಾಯಕರು ಸಿಡಿಮಿಡಿಗೊಂಡಿದ್ದರು.

ಅಲ್ಲದೇ ಕೆಲ ಜೆಡಿಎಸ್ ನಾಯಕರು ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವಂತೆ ಪಟ್ಟು ಹಿಡಿದಿದ್ದರು. ಅದರಂತೆ ಇದೀಗ ಅಂತಿಮವಾಗಿ ಜೆಡಿಎಸ್​ ಕೋರ್ ಕಮಿಟಿ ಸಭೆಯಲ್ಲಿ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದೆ.

ಹಿಂದಿನ ಲೇಖನಹುಬ್ಬಳ್ಳಿ: ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ- 14 ಮಂದಿ ಪ್ರಯಾಣಿಕರಿಗೆ ಗಾಯ
ಮುಂದಿನ ಲೇಖನಹೆಚ್.ಡಿ ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ: ಹೆಚ್.ಡಿ ದೇವೇಗೌಡ