ಮನೆ ರಾಜ್ಯ ರಾಜ ಮನೆತನಕ್ಕೆ ಎಷ್ಟು ಗೌರವ ಕೊಡಬೇಕೋ ಕೊಟ್ಟಿದ್ದೇವೆ: ಸಂಸದ ಪ್ರತಾಪ್ ಸಿಂಹ

ರಾಜ ಮನೆತನಕ್ಕೆ ಎಷ್ಟು ಗೌರವ ಕೊಡಬೇಕೋ ಕೊಟ್ಟಿದ್ದೇವೆ: ಸಂಸದ ಪ್ರತಾಪ್ ಸಿಂಹ

0

ಮೈಸೂರು: ದೇಶದ ಯಾವುದೇ ಎಕ್ಸ್‌’ಪ್ರೆಸ್‌ ಹೈವೇಗೆ ವ್ಯಕ್ತಿಯ ಹೆಸರು ಇಡುವ ಪದ್ಧತಿ ಇಲ್ಲ. ಕೇವಲ ನಗರದೊಳಗೆ ರಸ್ತೆಗಳಿಗೆ ಹೆಸರಿಡಲಾಗಿದೆ. ನಾವು ಈಗಾಗಲೇ ರಾಜಮನೆತನಕ್ಕೆ ಎಷ್ಟು ಗೌರವ ಕೊಡಬೇಕೋ ಅಷ್ಟನ್ನು ಕೊಟ್ಟಿದ್ದೇವೆ ಎಂದು ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಶಪಥ ರಸ್ತೆಗೆ ಕಾವೇರಿ ಹೆಸರಿಡುವ ವಿಚಾರ. ತಾಯಿ ದೊಡ್ಡವಳೋ, ಮಗ ದೊಡ್ಡವನೋ ಎಂಬ ಅನಗತ್ಯ ಗೊಂದಲ ತರಬೇಡಿ. ಮೈಸೂರು ಮಂಡ್ಯ ಬೆಂಗಳೂರಿಗೆ ಕಾವೇರಿ ತಾಯಿ ಇದ್ದಂತೆ. ತಾಯಿ ಕಾವೇರಿ ಹರಿದ ಕಾರಣಕ್ಕಾಗಿಯೇ ನಾಲ್ವಡಿ ಕೃಷ್ಣರಾಜ ಒಡೆಯರ್ ಅಣೆಕಟ್ಟೆ ಕಟ್ಟಿದರು. ಮಗನಿಗಿಂತ ತಾಯಿಯೇ ಶ್ರೇಷ್ಠ. ಈ ವಿಚಾರದಲ್ಲಿ ರಸ್ತೆಯ ಹೆಸರು ವಿವಾದ ಮಾಡಬೇಡಿ ಎಂದು ಮನವಿ ಮಾಡಿದರು.

ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು. ಮೈಸೂರು ರೈಲ್ವೆ ನಿಲ್ದಾಣಕ್ಕೆ ಚಾಮರಾಜ ಒಡೆಯರ್ ಹೆಸರನ್ನು ನಾಮಕರಣ ಮಾಡಿದ್ದೇವೆ ಎಂದು ಹೇಳಿದರು.

ಮಾರ್ಚ್’ನಲ್ಲಿ ಹೈವೇ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಮೈಸೂರು-ಬೆಂಗಳೂರು ಹೆದ್ದಾರಿ ಕಾಮಗಾರಿ ಒಂದು ತಿಂಗಳಲ್ಲಿ ಮುಗಿಯಲಿದ್ದು, ಮಾರ್ಚ್ ಎರಡು ಅಥವಾ ಮೂರನೇ ವಾರ ಪ್ರಧಾನಿ ನರೇಂದ್ರ ಮೋದಿ ಹೈವೇ ಉದ್ಘಾಟಿಸಲಿದ್ದಾರೆ. ಮಂಡ್ಯದಲ್ಲಿ ಕಾರ್ಯಕ್ರಮ ಆಯೋಜಿಸುವ ಚಿಂತನೆ ಇದೆ ಎಂದು ತಿಳಿಸಿದರು.

ಮೈಸೂರು-ಬೆಂಗಳೂರು ಎಕ್ಸ್‌’ಪ್ರೆಸ್‌ ಹೈವೇಗೆ 250 ರೂಪಾಯಿ ಟೋಲ್ ನಿಗದಿ ವಿಚಾರಕ್ಕೆ ಪ್ರತಿಕ್ರಿಯಿಸಿ, ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಅಂದಾಜಿನ ಟೋಲ್ ದರ ಪಟ್ಟಿ. ನನ್ನ ಪ್ರಕಾರ ಎರಡು ಕಡೆ ಸೇರಿ ಬೆಂಗಳೂರಿನಿಂದ ಮೈಸೂರಿಗೆ 250 ರೂ. ಟೋಲ್ ನಿಗದಿಯಾಗಬಹುದು. ಫ್ಲೈ ಓವರ್’ಗಳು ಬಂದಾಗ ಸಾಮಾನ್ಯವಾಗಿ ಟೋಲ್ ದರ ಕೊಂಚ ಹೆಚ್ಚಾಗುತ್ತದೆ. ಈ ರಸ್ತೆಯಲ್ಲೂ ಫ್ಲೈ ಓವರ್ ಗಳು ಇರುವ ಕಾರಣ 250 ರೂಪಾಯಿ ಟೋಲ್ ನಿಗದಿ ಆಗಬಹುದು ಎಂದರು.

ಕುಂಬಳಗೋಡು, ಮದ್ದೂರಿನಲ್ಲಿ ಫೈ‌ ಓವರ್ ಇವೆ. ಮೊದಲ ಹಂತದಲ್ಲಿ ಬೆಂಗಳೂರು-ನಿಡಘಟ್ಟ ನಡುವೆ ಟೋಲ್ ಶುರುವಾಗಿದೆ. 135 ರೂಪಾಯಿ ಟೋಲ್ ವಿಧಿಸಬೇಕೆಂದು ಶಿಫಾರಸು ಮಾಡಲಾಗಿದೆ. ಇನ್ನೂ ಫೈನಲ್ ಆಗಿಲ್ಲ ಎಂದರು.

ಹಿಂದಿನ ಲೇಖನಕಾರ್ಕಳದಲ್ಲಿ ನನ್ನ ಗೆಲುವು ಖಚಿತ: ಪ್ರಮೋದ್ ಮುತಾಲಿಕ್
ಮುಂದಿನ ಲೇಖನಎಲ್’ಟಿಟಿಇ ಮುಖ್ಯಸ್ಥ ಪ್ರಭಾಕರನ್ ಇನ್ನೂ ಜೀವಂತ