ಮನೆ ರಾಜಕೀಯ ಇದೇ ವರ್ಷ 5 ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ: ಸಿಎಂ ಸಿದ್ದರಾಮಯ್ಯ

ಇದೇ ವರ್ಷ 5 ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ: ಸಿಎಂ ಸಿದ್ದರಾಮಯ್ಯ

0

ಬೆಂಗಳೂರು: ಇಂದು ಸಚಿವ ಸಂಪುಟ ಸಭೆಯ ನಡೆದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್​ ನ ಐದು ಗ್ಯಾರಂಟಿಗಳಲ್ಲಿ ಎಲ್ಲವನ್ನೂ ಈ ವರ್ಷವೇ ಜಾರಿ ಮಾಡುವುದಾಗಿ ಹೇಳಿದ್ದಾರೆ.

Join Our Whatsapp Group

ಇಂದು ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ಆರ್ಥಿಕ ವರ್ಷದಲ್ಲಿ ಎಲ್ಲಾ ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ನಾವು ಚುನಾವಣೆ ಸಂದರ್ಭದಲ್ಲಿ ಪಕ್ಷದ ವತಿಯಿಂದ ಐದು ಗ್ಯಾರಂಟಿ ಘೋಷಣೆ ಮಾಡಿದ್ದೆವು. ಗ್ಯಾರಂಟಿ ಕಾರ್ಡ್ ​ಗಳಿಗೆ ನಾನು ಮತ್ತು ಡಿಕೆ ಶಿವಕುಮಾರ್ ಸಹಿ ಮಾಡಿದ್ದೆವು. ಜನರಿಗೆ ಗ್ಯಾರಂಟಿ ಯೋಜನೆಗಳನ್ನು ತಲುಪಿಸುವ ಭರವಸೆ ನೀಡಿದ್ದೆವು. ಕಾರ್ಡ್​ ಗಳನ್ನು ಕಾರ್ಯಕರ್ತರ ಮೂಲಕ ಹಂಚಿಕೆ ಮಾಡಿದ್ದೆವು. ಆದರೆ ವಿರೋಧ ಪಕ್ಷದವರು ನಾವು ಯೋಜನೆಗಳನ್ನು ಜಾರಿ ಮಾಡುವುದಿಲ್ಲ ಎಂದು ಟೀಕೆ ಮಾಡಿದ್ದಾರೆ. ಈ ಕುರಿತು ಕೆಲವು ಮಾಧ್ಯಮಗಳು ಕೂಡ ತಮ್ಮ ಅನಸಿಕೆ ಬರೆದಿವೆ ಎಂದು ಹೇಳಿದರು.

ಮೊದಲ ಕ್ಯಾಬಿನೆಟ್ ​ನಲ್ಲಿ ಗ್ಯಾರಂಟಿ ಕುರಿತು ‌ನಾವು ತೀರ್ಮಾನ ಮಾಡಿದ್ವಿ. ಐದು ಗ್ಯಾರಂಟಿ ಜಾರಿ ಬಗ್ಗೆ ತಾತ್ವಿಕ ಆದೇಶ ಹೊರಡಿಸಿದ್ವಿ. ಈಗ 2ನೇ ಸಚಿವ ಸಂಪುಟದಲ್ಲಿ ವಿಶೇಷವಾಗಿ ಗ್ಯಾರಂಟಿ ಜಾರಿಗೆ ಕುರಿತು ಸುಧೀರ್ಘವಾಗಿ ಚರ್ಚೆ ಮಾಡಿದ್ದೇವೆ. ಐದು ಗ್ಯಾರಂಟಿ ಗಳನ್ನು ಈ ಆರ್ಥಿಕ ವರ್ಷದಲ್ಲಿ ಜಾರಿಗೆ ತರ್ತೇವೆ ಎಂದರು

ಗ್ಯಾರಂಟಿ ಘೋಷಣೆಗೂ ಮುನ್ನ, ಸಚಿವ ಸಂಪುಟ ಸಭೆಯಲ್ಲಿ ಸುಮಾರು ಮೂರು ಗಂಟೆಗಳ ಕಾಲ ಸುದೀರ್ಘವಾಗಿ ಚರ್ಚಿಸಿದರು.

ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​, ಆಹಾರ ಸಚಿವ ಕೆ.ಎಚ್ ಮುನಿಯಪ್ಪ, ಇಂಧನ ಸಚಿವ ಕೆಜೆ ಜಾರ್ಜ್​, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೇರಿದಂತೆ ಪ್ರಮುಖ ಸಚಿವರುಗಳು ಸುದ್ದಿಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

ಹಿಂದಿನ ಲೇಖನಜಿಎಸ್‌ ಟಿ ಪೂರ್ವದ ಸರ್ಕಾರಿ ಕಾಮಗಾರಿಗಳ ತೆರಿಗೆ ಪಾವತಿ ಗೊಂದಲ ಪರಿಹರಿಸಲು ಹೈಕೋರ್ಟ್‌ ನಿಂದ ಮಹತ್ವದ ನಿರ್ದೇಶನ
ಮುಂದಿನ ಲೇಖನಜುಲೈ 1ರಿಂದ 200 ಯುನಿಟ್ ವಿದ್ಯುತ್ ಉಚಿತ: ಸಿದ್ದರಾಮಯ್ಯ ಘೋಷಣೆ