ಮೈಸೂರು: ಕೇರಳ ರಾಜ್ಯದಲ್ಲಿ ವೆಸ್ಟ್ ನೈಲ್ ಜ್ವರ ಹೆಚ್ಚಾಗಿ ತಲೆದೋರಿದ್ದು, ಮೈಸೂರು ಗಡಿಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಹೆಚ್ ಡಿ ಕೋಟೆ ತಾಲ್ಲೂಕಿನ ಬಾವಲಿ ಚೆಕ್ ಪೋಸ್ಟ್ ನಲ್ಲಿ ಆರೋಗ್ಯಾಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದು, ಗಡಿಯೊಳಗೆ ಬಂದು ಹೋಗುವ ವಾಹನಗಳ ಸವಾರರ ಮೇಲೆ ಕಟ್ಟೆಚ್ಚರ ವಹಿಸಿದ್ದಾರೆ.
ಕೇರಳದಲ್ಲಿ ಕಾಣಿಸಿಕೊಂಡ ಜ್ವರಕ್ಕೆ ಮೈಸೂರು ಗಡಿಭಾಗದಲ್ಲಿ ಅಲರ್ಟ್ ಮಾಡಲಾಗಿದೆ. ಈ ಹಿಂದೆ ಕೋವಿಡ್, ಹಂದಿಜ್ವರ, ನಿಫಾ ಕೇರಳದಲ್ಲಿ ಕಾಣಿಸಿಕೊಂಡು ರಾಜ್ಯಕ್ಕೆ ಹರಡಿತ್ತು. ಮೊದಲ ಪ್ರಕರಣಗಳು ಕಂಡು ಬಂದಿದ್ದ ಕೇರಳ ರಾಜ್ಯ. ಕೇರಳ ಗಡಿ ಮೂಲಕ ಮೈಸೂರಿಗೆ ಪ್ರವೇಶ ಪಡೆಯುವ ರೋಗಗಳು. ಆದ್ದರಿಂದ ಅಲರ್ಟ್ ಘೋಷಿಸಲಾಗಿದೆ.
ವೆಸ್ಟ್ ನೈಲ್ ವೈರಸ್ ಲಕ್ಷಣಗಳು: ತೀವ್ರ ಅನಾರೋಗ್ಯದ ಲಕ್ಷಣಗಳೆಂದರೆ ಅಧಿಕ ಜ್ವರ, ತಲೆನೋವು, ಕುತ್ತಿಗೆ ಬಿಗಿತ, ಮೂರ್ಛೆ ಹೋದಂತೆ ಆಗುವುದು, ದಿಗ್ಭ್ರಮೆಗೊಳ್ಳುವುದು, ಕೋಮಾ, ನಡುಕ, ಸೆಳೆತ, ಸ್ನಾಯು ದೌರ್ಬಲ್ಯ, ದೃಷ್ಟಿ ನಷ್ಟ, ಮರಗಟ್ಟುವಿಕೆ ಮತ್ತು ಪಾರ್ಶ್ವವಾಯು. ತೀವ್ರ ಅನಾರೋಗ್ಯದಿಂದ ಚೇತರಿಸಿಕೊಳ್ಳಲು ಹಲವಾರು ವಾರಗಳು ಅಥವಾ ತಿಂಗಳುಗಳು ತೆಗೆದುಕೊಳ್ಳಬಹುದು.
ಶೇಕಡಾ 80ರಷ್ಟು ಮಂದಿಯಲ್ಲಿ ಲಕ್ಷಣರಹಿತವಾಗಿದ್ದರೆ ಇನ್ನು ಕೆಲವರಲ್ಲಿ ಜ್ವರ, ತಲೆನೋವು, ಆಯಾಸ, ದೇಹದ ನೋವು, ವಾಕರಿಕೆ, ದದ್ದು ಮತ್ತು ಊದಿಕೊಂಡ ಗ್ರಂಥಿಗಳಂತಹ ರೋಗ ಲಕ್ಷಣಗಳು ಕಂಡುಬರುತ್ತದೆ. ವೆಸ್ಟ್ ನೈಲ್ ವೈರಸ್ ಸೋಂಕಿಗೆ ಒಳಗಾದ ಸುಮಾರು 150 ವ್ಯಕ್ತಿಗಳಲ್ಲಿ ಒಬ್ಬರು ಹೆಚ್ಚು ತೀವ್ರವಾದ ಕಾಯಿಲೆಯನ್ನು ಹೊಂದಿರುತ್ತಾರೆ. ತೀವ್ರ ಅನಾರೋಗ್ಯದಿಂದ ಚೇತರಿಸಿಕೊಳ್ಳಲು ಹಲವಾರು ವಾರಗಳು ಅಥವಾ ತಿಂಗಳುಗಳು ತೆಗೆದುಕೊಳ್ಳಬಹುದು.
ಎಚ್.ಡಿ.ಕೋಟೆ ತಾಲೂಕು ಆರೋಗ್ಯಾಧಿಕಾರಿಗಳು ಜಾಗೃತಿ ಮೂಡಿಸುತ್ತಿದ್ದಾರೆ. ಗಡಿ ಭಾಗದಲ್ಲಿ ಹಲವರಲ್ಲಿ ಆರೋಗ್ಯದ ಸಮಸ್ಯೆ ಕಾಣಿಸಿಕೊಂಡಿದೆ. ಜ್ವರ, ತಲೆನೋವು, ಶೀತದಿಂದ ರೋಗಿಗಳು ಬಳಲುತ್ತಿದ್ದಾರೆ. ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ ಸ್ಯಾಂಪಲ್ ರವಾನಿಸಲಾಗಿದೆ.
ವೆಸ್ಟ್ ನೈಲ್ ವೈರಸ್ ಎಂದರೇನು?: ವೆಸ್ಟ್ ನೈಲ್ ವೈರಸ್ (WNV) ಸೊಳ್ಳೆಯಿಂದ ಹರಡುವ, ಏಕ-ತಂತು ಆರ್ ಎನ್ ಎ ವೈರಸ್ ಆಗಿದೆ. ಇದು ಫ್ಲೇವಿವೈರಸ್ ಮತ್ತು ಜಪಾನೀಸ್ ಎನ್ಸೆಫಾಲಿಟಿಸ್ ಮತ್ತು ಹಳದಿ ಜ್ವರವನ್ನು ಉಂಟುಮಾಡುವ ವೈರಸ್ ಗಳಿಗೆ ಸಂಬಂಧಿಸಿದ್ದಾಗಿದೆ.
ಕ್ಯೂಲೆಕ್ಸ್ ಜಾತಿಯ ಸೊಳ್ಳೆಗಳು ಪ್ರಸರಣಕ್ಕೆ ಪ್ರಮುಖ ಕಾರಣಗಳಾಗಿರುತ್ತದೆ. ಸೋಂಕಿತ ಸೊಳ್ಳೆಗಳು ವೈರಸ್ ಗೆ ಪ್ರಮುಖ ಕಾರಣವಾಗಿರುವುದರಿಂದ ಪಕ್ಷಿಗಳು ಸೇರಿದಂತೆ ಮನುಷ್ಯರು ಮತ್ತು ಪ್ರಾಣಿಗಳಲ್ಲಿ ರೋಗವನ್ನು ಹರಡುತ್ತವೆ.
ಹಾಲ್ನೊರೆಯಂತೆ ಉಕ್ಕುತ್ತಿರುವ ದೂಧ್ ಸಾಗರ ಜಲಪಾತ
ಪುಣೆಯಲ್ಲಿ ಭಾರೀ ಮಳೆ , ಉಕ್ಕಿಹರಿಯುತ್ತಿರುವ
ಗ್ರಾಮಕ್ಕೆ ಕರೆಂಟ್ ಕೊಡಲು ಲೈನ್ ಮ್ಯಾನ್ ಹೋರಾಟ
ಸವಾಲ್ ನ್ಯೂಸ್ ಪ್ರಚಲಿತ ಸುದ್ದಿಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.