ಮನೆ ರಾಜಕೀಯ ಸಿದ್ದರಾಮಯ್ಯ ಅವಧಿಯಲ್ಲಿ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಾಗ ರಾಜೀನಾಮೆ ನೀಡಿದ್ದರೆ?: ಸಿಎಂ ಬೊಮ್ಮಾಯಿ ಪ್ರಶ್ನೆ

ಸಿದ್ದರಾಮಯ್ಯ ಅವಧಿಯಲ್ಲಿ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಾಗ ರಾಜೀನಾಮೆ ನೀಡಿದ್ದರೆ?: ಸಿಎಂ ಬೊಮ್ಮಾಯಿ ಪ್ರಶ್ನೆ

0

ಮಂಗಳೂರು:  ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರಿ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಾಗ ರಾಜೀನಾಮೆ ನೀಡಿದ್ದರಾ? ಎಂದು ಕಾಂಗ್ರೆಸ್ ನಾಯಕರ ಆಗ್ರಹಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದರು.

ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಪ್ರಾಥಮಿಕ ತನಿಖೆ ಪೂರ್ಣಗೊಂಡ ನಂತರ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಅವರ ರಾಜೀನಾಮೆ ಪಡೆಯುವ ಬಗ್ಗೆ ಯೋಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದ್ದಾರೆ.

ಪ್ರಕರಣದ ತನಿಖೆಯಲ್ಲಿ ಸರ್ಕಾರ ಮಧ್ಯಪ್ರವೇಶಿಸುವುದಿಲ್ಲ ಮತ್ತು ಮುಕ್ತ ತನಿಖೆಗೆ ಅವಕಾಶ ನೀಡಲಾಗುವುದು. ಈಶ್ವರಪ್ಪನವರ ಮೇಲೆ ಲಂಚದ ಆರೋಪ ಹೊರಿಸಿರುವ ಪಾಟೀಲ್ ಅವರು ಈ ಬಗ್ಗೆ ಸರ್ಕಾರಕ್ಕೆ ಯಾವುದೇ ದೂರು ನೀಡಿಲ್ಲ ಮತ್ತು ಅವರು ಕೇವಲ ಮಾಧ್ಯಮಗಳ ಮುಂದೆ ಆರೋಪ ಮಾಡಿದ್ದಾರೆ ಎಂದು ಹೇಳಿದರು.

“ಸಚಿವ ಈಶ್ವರಪ್ಪ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪಗಳನ್ನು ನಿರಾಕರಿಸಿದ್ದಾರೆ ಮತ್ತು ಅವರ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ಸಹ ದಾಖಲಿಸಿದ್ದಾರೆ. ಅದರ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ” ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಹಿಂದಿನ ಲೇಖನಸಚಿವ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಿಸಿ ಬಂಧಿಸಿ, ಸಂಪುಟದಿಂದ ವಜಾ ಮಾಡಿ: ಕಾಂಗ್ರೆಸ್ ನಾಯಕರ ಆಗ್ರಹ
ಮುಂದಿನ ಲೇಖನಚಿನ್ನಾಭರಣ ವಿಚಾರದಲ್ಲಿ ಗಲಾಟೆ: ಪತ್ನಿಯನ್ನೇ ಕೊಂದ ಗಂಡ