ಮನೆ ದೇವಸ್ಥಾನ ತಲಕಾಡು ಪಂಚಲಿಂಗಗಳ ವಿಶೇಷತೆ ಏನು..?  ಐದು ಲಿಂಗದಲ್ಲಿ 5 ವೈಶಿಷ್ಟ್ಯ

ತಲಕಾಡು ಪಂಚಲಿಂಗಗಳ ವಿಶೇಷತೆ ಏನು..?  ಐದು ಲಿಂಗದಲ್ಲಿ 5 ವೈಶಿಷ್ಟ್ಯ

0

ತಲಕಾಡು(Talakadu): ಬೆಂಗಳೂರಿನಿಂದ 132 ಕಿಮೀ ದೂರದಲ್ಲಿ ಮತ್ತು ಮೈಸೂರಿನ ಬಳಿ 50 ಕಿಮೀ ದೂರದಲ್ಲಿರುವ ತಲಕಾಡು ಐತಿಹಾಸಿಕ ದೇವಾಲಯಗಳ ಪಟ್ಟಣವಾಗಿದ್ದು, ದೇವಾಲಯಗಳು ಕಾವೇರಿ ನದಿಯ ದಡದ ಮರಳಿನ ಅಡಿಯಲ್ಲಿ ನೆಲೆಗೊಂಡಿವೆ.

ಈ ದೇವಾಲಯಗಳು 11 ನೇ ಶತಮಾನದಲ್ಲಿ ಗಂಗ ರಾಜವಂಶದ ಅವಧಿಯಲ್ಲಿ ನಿರ್ಮಾಣಗೊಂಡವು. ಮತ್ತು ಕಾಲಾನಂತರದಲ್ಲಿ ಹೊಯ್ಸಳ, ವಿಜಯನಗರ ಮತ್ತು ಮೈಸೂರು ರಾಜವಂಶಜರು ಈ ದೇವಾಲಯಗಳನ್ನು ನೋಡಿಕೊಂಡವು. ಪಂಚ ಲಿಂಗ ಎಂದು ಜನಪ್ರಿಯವಾಗಿ ಕರೆಯಲ್ಪಡುವ ತಲಕಾಡು ಶಿವನಿಗೆ ಅರ್ಪಿತವಾದ ಐದು ಪ್ರಮುಖ ದೇವಾಲಯಗಳನ್ನು ಹೊಂದಿದೆಈ ದೇವಾಲಯಗಳ ವಾಸ್ತುಶಿಲ್ಪವು ದ್ರಾವಿಡ ಶೈಲಿಯಲ್ಲಿದ್ದು ಇದು ಸಂಕೀರ್ಣವಾಗಿ ಕೆತ್ತಿದ ಕಂಬಗಳು, ಛಾವಣಿಗಳು ಮತ್ತು ದ್ವಾರಪಾಲಕರನ್ನು ಹೊಂದಿದೆ.

ತಲಕಾಡು ಪಂಚಲಿಂಗ ದರ್ಶನ

ವೈದ್ಯನಾಥೇಶ್ವರ:-ತಲ ಮತ್ತು ಕಾಡ ಎಂಬ ಬೇಡರಿಗೆ ಮೋಕ್ಷ ಪ್ರದಾನಿಸಿದ ಪರಮೇಶ್ವರ ಇಲ್ಲಿ ತಾನೇ ಸ್ವಯಂ ವೈದ್ಯ ಮಾಡಿಕೊಂಡಿದ್ದನಂತೆ.ಇದರಿಂದ ಶಿವನನ್ನ ಇಲ್ಲಿ ವೈದ್ಯನಾಥೇಶ್ವನಾಗಿ ಪೂಜೆ ಮಾಡಲಾಗುತ್ತೆ. ಈ ಕಾರಣದದ ಇಲ್ಲಿ‌ ಪೂಜೆ ಮಾಡಿದರೆ ಸಕಲ ರೋಗ ರುಜಿನಗಳು ವಾಸಿಯಾಗುತ್ತದೆ ಎಂಬ ನಂಬಿಕೆ ಇದೆ. ಇದರಿಂದ ಇಲ್ಲಿ ವೈದ್ಯನಾಥನಿಗೆ ಅಗ್ರ ಪೂಜೆಯನ್ನು ಮಾಡಲಾಗುತ್ತೆ.

ಅರ್ಕನಾಥೇಶ್ವರ: ಗ್ರಹಗಳಿಗೆಲ್ಲಾ ಅಧಿಪತಿಯಾಗಲು ಪುರಾಣದಲ್ಲಿ ಸೂರ್ಯನಿಂದ ಪೂಜಿಸಲ್ಪಟ್ಟ ಶಿವಲಿಂಗವೇ ಅರ್ಕನಾಥೇಶ್ವರನೆಂದು ಪ್ರಸಿದ್ಧಿಯಾಗಿದೆ. ಇದು ತಲಕಾಡಿನಲ್ಲಿ ವೈದ್ಯನಾಥೇಶ್ವರ ದೇಗುಲದ ಪೂರ್ವ ದಿಕ್ಕಿಗೆ ಮೂರು ಮೈಲಿ ದೂರದ ವಿಜಯಪುರದಲ್ಲಿದೆ‌‌. ಇದು ಸಕಲ ಸಂಕಷ್ಟ ನಿವಾರಕ ಲಿಂಗವೆನಿಸಿದೆ. ಅರ್ಕನಾಥೇಶ್ವರನ ಅರ್ಚನೆಗೆ ಮಾಘ ಶುದ್ಧ ಸಪ್ತಮಿ ದಿನವು ಬಹಳ ಶ್ರೇಷ್ಠವಾಗಿದೆ ಎಂದು ಹೇಳಲಾಗುತ್ತದೆ‌.

ಪಾತಾಳೇಶ್ವರ : ನಾಗಲೋಕದ ಚಕ್ರಾಧಿಪತ್ಯಕ್ಕಾಗಿ ವಾಸುಕಿಯಿಂದ ಪೂಜಿತಗೊಂಡಿರುವ ಈ ಶಿವಲಿಂಗವೇ ಪಾತಾಳೇಶ್ವರ. ವಾಸುಕೀಶ್ವರನೆಂಬುವುದು ಪಾತಾಳೇಶ್ವರನ ಮತ್ತೊಂದು ಹೆಸರಾಗಿದೆ. ಈ ದೇವಾಲಯ ಬೇರೆ ದೇವಾಲಯಗಳಿಗಿಂತ ಆಳದಲ್ಲಿರುವ ಕಾರಣ ಪಾತಾಳೇಶ್ವರನೆಂದೇ ಹೆಸರಾಗಿದೆ. ಇದರ ಪೂಜೆಗೆ ಶ್ರಾವಣ ಶುದ್ಧ ಪಂಚಮಿ ಅತ್ಯಂತ ಶ್ರೇಷ್ಠ ದಿನವಾಗಿದೆ. ಈ ಲಿಂಗವು ಪ್ರತಿದಿನ ಐದು ಬಣ್ಣಗಳನ್ನು ತಾಳುತ್ತದೆಂದು ಹೇಳಲಾಗುತ್ತದೆ.

ಮರಳೇಶ್ವರ : ತಲಕಾಡಿನ ಮರಳಿಗೆಲ್ಲ ಒಡೆಯನೆಂದೆ ಮರಳೇಶ್ವರನನ್ನು ಕರೆಯಲಾಗುತ್ತೆ. ಮರಳೇಶ್ವರ ಬ್ರಹ್ಮನಿಂದ ಪೂಜಿಸಲ್ಪಟ್ಟವನ್ನು ಎಂದು‌ ಹೇಳಲಾಗುತ್ತೆ. ಬ್ರಹ್ಮನಿಗೆ ಪ್ರತ್ಯಕ್ಷನಾಗಿ ವರನೀಡಿದ ಎಂದು ಹೇಳಲಾಗುವುದು ಇದರಿಂದ ಮರಳೇಶ್ವರನಿಗೆ ಸೈತಕೇಶ್ವರನೆಂಬ ಕರೆಯಲಾಗುತ್ತದೆ. ಇದರಿಂದ ಈ ದೇವಾಲಯದಲ್ಲಿ ಪೂಜೆ ಮಾಡಿ ಬೇಡಿಕೊಂಡರೆ ಬೇಡಿದ ವರವನ್ನು ಕೊಡುತ್ತಾನೆ ಎಂಬ ನಂಬಿಕೆ‌ ಸಹ ಇದೆ.

ಮಲ್ಲಿಕಾರ್ಜುನೇಶ್ವರ : ಕಾಮಧೇನುವಿನಿಂದ ಪೂಜೆಗೊಳ್ಳುತ್ತಿದ್ದ ಶಿವಲಿಂಗವೇ ಮಲ್ಲಿಕಾರ್ಜುನೇಶ್ವರ ಎಂದು ಹೇಳುತ್ತಾರೆ. ಮಲ್ಲಿಕಾರ್ಜುನೇಶ್ವರ

ಮುನ್ನೂರು ಅಡಿ ಎತ್ತರದ ಮುಡುಕುತೊರೆ ಬೆಟ್ಟದಲ್ಲಿ ನೆಲೆಸಿದ್ದಾನೆ. ಈತ ಕೂಡ ಕೇಳಿದ ವರವನ್ನ ಕೊಡುತ್ತಾನೆ ಎಂದು ಭಕ್ತರ ನಂಬಿಕೆಯಾಗಿದೆ. ಇಲ್ಲಿ ಕಾವೇರಿ ನದಿಯು ನಾಲ್ಕು ದಿಕ್ಕುಗಳಲ್ಲಿ ಹರಿಯುವುದು ಕ್ಷೇತ್ರದ ವಿಶೇಷವಾಗಿದೆ.