16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ರೋಚಕ ಘಟ್ಟದತ್ತ ತಲುಪುತ್ತಿದೆ. ಒಂದು ತಂಡದ ಸೋಲು-ಗೆಲುವಿನ ಲೆಕ್ಕಚಾರ ಮತ್ತೊಂದು ತಂಡದ ಮೇಲೆ ಪರಿಣಾಮ ಬೀರುತ್ತಿದೆ. ಅಲ್ಲದೆ 200+ ರನ್ಗಳ ಟಾರ್ಗೆಟ್ ನೀಡಿದರೂ ಸುಲಭವಾಗಿ ಗುರಿ ಬೆನ್ನಟ್ಟಿ ಗೆಲುವು ಸಾಧಿಸುತ್ತಿದೆ. ಹೀಗಾಗಿ ಮುಂಬರುವ ಪಂದ್ಯಗಳು ಸಾಕಷ್ಟು ಪ್ರಾಮುಖ್ಯತೆ ಪಡೆದಿವೆ.
ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಾಯಿಂಟ್ ಟೇಬಲ್’ನಲ್ಲಿ ಐದನೇ ಸ್ಥಾನದಲ್ಲಿದೆ. ಆಡಿರುವ ಒಂಬತ್ತು ಪಂದ್ಯಗಳಲ್ಲಿ ಐದು ಗೆಲುವು, ನಾಲ್ಕು ಸೋಲು ಕಂಡು 10 ಅಂಕ ಸಂಪಾದಿಸಿದೆ. -0.030 ರನ್’ರೇಟ್ ಹೊಂದಿದೆ.
ಅಂಕಪಟ್ಟಿಯಲ್ಲಿ ಮಧ್ಯದಲ್ಲಿರುವ ಆ’ರ್’ಸಿಬಿಗೆ ಮುಂದಿನ ಪಂದ್ಯ ಮಹತ್ವದ್ದಾಗಿದೆ. ರನ್’ರೇಟ್ ಅನ್ನು + ಮಾಡಿಸಿಕೊಂಡು ಮುಂದೆ ಸಾಗಬೇಕಾದ ಒತ್ತಡಕ್ಕೆ ಸಿಲುಕಿದೆ.
ಆರ್’ಸಿಬಿ ತಂಡದ ಮುಂದಿನ ಎದುರಾಳಿ ಡೇವಿಡ್ ವಾರ್ನರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡ. ಈ ಪಂದ್ಯ ಮೇ 6 ಶನಿವಾರದಂದು ನಡೆಯಲಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಈ ಮ್ಯಾಚ್ ಆಯೋಜಿಸಲಾಗಿದ್ದು, ಸಂಜೆ 7:30ಕ್ಕೆ ಶುರುವಾಗಲಿದೆ.
ಡೆಲ್ಲಿ ಪಾಯಿಂಟ್ಸ್ ಟೇಬಲ್’ನಲ್ಲಿ ಕೊನೆಯ ಸ್ಥಾನದಲ್ಲಿದೆ. ಆಡಿದ 9 ಪಂದ್ಯಗಳ ಪೈಕಿ ಕೇವಲ ಮೂರರಲ್ಲಷ್ಟೆ ಜಯ ಸಾಧಿಸಿ 6 ಅಂಕ ಸಂಪಾದಿಸಿ -0.768 ರನ್ರೇಟ್ ಹೊಂದಿದೆ.
ಅಂಕಪಟ್ಟಿಯಲ್ಲಿ ಮೇಲೇರಲು ಉಭಯ ತಂಡಗಳಿಗೆ ಮುಂದಿನ ಪಂದ್ಯ ಬಹುಮುಖ್ಯವಾಗಿದೆ. ಆರ್ಸಿಬಿಗೆ ಉಳಿದಿರುವುದು ಕೇವಲ ಐದು ಪಂದ್ಯ ಮಾತ್ರ. ಇದರಲ್ಲಿ ಕನಿಷ್ಠ ನಾಲ್ಕು ಪಂದ್ಯಗಳನ್ನು ಗೆಲ್ಲಲೇ ಬೇಕು.
ರಾಯಲ್ ಚಾಲೆಂಜರ್ಸ್ ಬೌಲಿಂಗ್ ವಿಭಾಗ ಬಲಿಷ್ಠ ಆಗಿರುವುದು ಸಂತಸದ ಸಂಗತಿ. ಜೋಶ್ ಹೇಜ್ಲೆವುಡ್ ಪರಿಣಾಮಕಾರಿ ಆಗಿ ಗೋಚರಿಸಿದ್ದಾರೆ. ಸ್ಪಿನ್ ವಿಭಾಗ ಕೂಡ ಬಲಿಷ್ಠವಾಗಿದೆ. ಬ್ಯಾಟಿಂಗ್ನಲ್ಲಿ ಕೊಹ್ಲಿ, ಫಾಫ್ ಮತ್ತು ಮ್ಯಾಕ್ಸ್ ವೆಲ್ ಬಿಟ್ಟರೆ ಉಳಿದವರು ಯಾರೂ ಅಬ್ಬರಿಸುತ್ತಿಲ್ಲ.