ಮನೆ ರಾಜ್ಯ ದಾಖಲಾತಿ ಪರಿಶೀಲನೆಗೆ ಎಲ್ಲೆಂದರಲ್ಲಿ ವಾಹನಗಳನ್ನು ತಡೆದು ನಿಲ್ಲಿಸುವ ಹಾಗಿಲ್ಲ: ಪ್ರವೀಣ್ ಸೂದ್

ದಾಖಲಾತಿ ಪರಿಶೀಲನೆಗೆ ಎಲ್ಲೆಂದರಲ್ಲಿ ವಾಹನಗಳನ್ನು ತಡೆದು ನಿಲ್ಲಿಸುವ ಹಾಗಿಲ್ಲ: ಪ್ರವೀಣ್ ಸೂದ್

0
ಸಾಂದರ್ಭಿಕ ಚಿತ್ರ

ಬೆಂಗಳೂರು(Bengaluru): ವಾಹನಗಳ ದಾಖಲಾತಿ ಪರಿಶೀಲನೆ ಹೆಸರಿನಲ್ಲಿ ಪೊಲೀಸರು ಎಲ್ಲೆಂದರಲ್ಲಿ ವಾಹನ ಸವಾರರನ್ನು ತಡೆದು ನಿಲ್ಲಿಸದಂತೆ ರಾಜ್ಯ ಪೊಲೀಸ್ ಇಲಾಖೆಯ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.

ರಸ್ತೆಯಲ್ಲಿ ಎಲ್ಲೆಂದರಲ್ಲಿ ವಾಹನ ತಡೆದು ಪರಿಶೀಲನೆ ನಡೆಸುವ ಪೊಲೀಸರ ಕ್ರಮದ ಕುರಿತು ಟ್ವಿಟರ್ ಬಳಕೆದಾರರೊಬ್ಬರು ಉಲ್ಲೇಖಿಸಿದ್ದರು. ಈ ಹಿಂದೆ ಸಂಚಾರ ವಿಭಾಗದ ಎಸಿಪಿಯಾಗಿದ್ದ ಪ್ರವೀಣ್ ಸೂದ್ ದಾಖಲೆಗಳ ಪರಿಶೀಲನೆ ಹೆಸರಿನಲ್ಲಿ ಅನಾವಶ್ಯಕವಾಗಿ ವಾಹನಗಳನ್ನು ತಡೆದು ನಿಲ್ಲಿಸುವುದಕ್ಕೆ ಬ್ರೇಕ್ ಹಾಕಿದ್ದರು. ಈಗ ಡಿಜಿ, ಐಜಿಪಿಯಾಗಿರುವ ಅವರಿಂದ ಮತ್ತೊಮ್ಮೆ ಅದೇ ನಿಯಮ ನಿರೀಕ್ಷಿಸಬಹುದೇ ಟ್ವೀಟ್​ ಮಾಡಿದವರು ಪ್ರಶ್ನಿಸಿದ್ದರು.

ಈ ಟ್ವೀಟ್​ಗೆ ಪ್ರತಿಕ್ರಿಯಿಸಿರುವ ಪ್ರವೀಣ್ ಸೂದ್, ‘ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ವಾಹನಗಳನ್ನು ದಾಖಲಾತಿ ಪರಿಶೀಲನೆ ಹೆಸರಿನಲ್ಲಿ ಅನಾವಶ್ಯಕವಾಗಿ ತಡೆಯದಂತೆ’ ಸೂಚಿಸಿದ್ದು, ಕೇವಲ ಡ್ರಿಂಕ್ ಆ್ಯಂಡ್ ಡ್ರೈವ್ ಪರಿಶೀಲಿಸಬಹುದು ಎಂದು ನಗರ ಪೊಲೀಸ್ ಆಯುಕ್ತರು ಹಾಗೂ ಸಂಚಾರ ವಿಭಾಗದ ಜಂಟಿ ಆಯುಕ್ತರಿಗೆ ಟ್ಯಾಗ್ ಮಾಡುವ ಮೂಲಕ ಸೂಚನೆ ನೀಡಿದ್ದಾರೆ.

ಹಿಂದಿನ ಲೇಖನಪಠ್ಯ ಪರಿಷ್ಕರಣೆ: ಹೊಸ ಸಮಿತಿ ರಚನೆ ಇಲ್ಲ- ಸಚಿವ ಬಿ.ಸಿ ನಾಗೇಶ್ ಸ್ಪಷ್ಟನೆ
ಮುಂದಿನ ಲೇಖನಮೊದಲ ಮಗುವಿನ ನಿರೀಕ್ಷೆಯಲ್ಲಿ ಆಲಿಯಾ ಭಟ್- ರಣಬೀರ್ ಕಪೂರ್ ಜೋಡಿ