ಮನೆ ರಾಜಕೀಯ ಕಪ್ಪು ಚುಕ್ಕೆಯಿಂದ ಬೆತ್ತಲಾದ ವೈಟ್ನರ್ ರಾಮಯ್ಯ: ಜೆಡಿಎಸ್ ವ್ಯಂಗ್ಯ

ಕಪ್ಪು ಚುಕ್ಕೆಯಿಂದ ಬೆತ್ತಲಾದ ವೈಟ್ನರ್ ರಾಮಯ್ಯ: ಜೆಡಿಎಸ್ ವ್ಯಂಗ್ಯ

0

ಬೆಂಗಳೂರು: ಮುಡಾ ಹಗರಣದಲ್ಲಿ ರಾಜ್ಯಪಾಲರ ಪ್ರಾಸಿಕ್ಯೂಷನ್​ ಅನುಮತಿ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದ ಸಿಎಂ ಸಿದ್ದರಾಮಯ್ಯಗೆ ತೀವ್ರ ಹಿನ್ನಡೆಯಾಗಿದೆ. ಸಿಎಂ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಪ್ರತಿಪಕ್ಷಗಳು ಅವರ ವಿರುದ್ಧ ಮುಗಿಬಿದ್ದಿವೆ. ಬಿಜೆಪಿ ಜತೆ ಇದೀಗ ಎನ್​ಡಿಎ ಮಿತ್ರಪಕ್ಷ ಜೆಡಿಎಸ್ ಕೂಡ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದೆ.

Join Our Whatsapp Group

ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಸಿದ್ದರಾಮಯ್ಯ ಬಗ್ಗೆ ವ್ಯಂಗ್ಯವಾಡಿರುವ ಜೆಡಿಎಸ್, “ಕಪ್ಪು ಚುಕ್ಕೆ”ಯಿಂದ ಬೆತ್ತಲಾದ “ವೈಟ್ನರ್ ರಾಮಯ್ಯ” ಎಂದು ಉಲ್ಲೇಖಿಸಿದೆ.

ಜೆಡಿಎಸ್ ಎಕ್ಸ್ ಸಂದೇಶ

‘ಮುಡಾದಲ್ಲಿ ಹಗರಣ ನಡೆದೇ ಇಲ್ಲ, ನನ್ನ ಮೇಲೆ ಕಪ್ಪು ಚುಕ್ಕು ಇಲ್ಲ ಎಂದು ಸ್ವಯಂ ಸರ್ಟಿಫಿಕೇಟ್ ಪಡೆದಿದ್ದ ಸಿದ್ದರಾಮಯ್ಯ ಅವರೇ, ನಿಮಗೆ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರೆಯುವ ಯಾವ ನೈತಿಕತೆ ಉಳಿದಿಲ್ಲ. ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ಗೌರವ ಉಳಿಸಿಕೊಳ್ಳಿ’ ಎಂದು ಜೆಡಿಎಸ್ ಆಗ್ರಹಿಸಿದೆ.

ಮುಡಾ ಹಗರಣ ಪ್ರಾಸಿಕ್ಯೂಷನ್ ​ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸಿರುವ ಹೈಕೋರ್ಟ್, ಸಿಎಂ ವಿರುದ್ಧದ ಆರೋಪಗಳ ತನಿಖೆ ಅಗತ್ಯ ಎಂದಿದೆ. ಸಿಎಂ ಪತ್ನಿಯೇ ಫಲಾನುಭವಿಯಾಗಿರುವುದರಿಂದ ತನಿಖೆ ಅಗತ್ಯ ಎಂದು ಹೈಕೋರ್ಟ್ ನೀಡಿರುವ ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ.

ಬೀಡಾಡಿ ಮಂತ್ರಿಗಳಿಂದ ಆರೋಪ; ಕುಮಾರಸ್ವಾಮಿ

ಇನ್ನು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಕೆಲವು ಸಚಿವರು ಮಾಡಿರುವ ಆರೋಪಗಳಿಗೆ ಅವರು ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೆಲವೊಬ್ಬರು ಬಿಡಾಡಿ ಮಂತ್ರಿಗಳು ನನ್ನ ವಿರುದ್ಧ ಆಪಾದನೆ ಮಾಡಿದ್ದಾರೆ. ನಾನು ಕೇಂದ್ರ ಸಚಿವನಾಗಿರುವುದನ್ನು ಅವರಿಗೆ ಸಹಿಸಲು ಆಗ್ತಿಲ್ಲ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.