ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಯಾರಾದರೂ ಮುಟ್ಟೋಕೆ ಆಗುತ್ತಾ? ಯಾರಾದರೂ ಸಿಎಂ ಮುಟ್ಟಿದರೆ ಪೊಲೀಸರು ಕೇಸ್ ಹಾಕುತ್ತಾರೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ವ್ಯಂಗ್ಯವಾಡಿದರು.
ಬೆಳಗಾವಿಯಲ್ಲಿ ಗುರುವಾರ (ನ.14) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಮುಟ್ಟಿದರೆ ಪೊಲೀಸರು ಪ್ರಕರಣ ದಾಖಲಿಸುತ್ತಾರೆ ಎನ್ನುವ ಅರ್ಥದಲ್ಲಿ ಸಿಎಂ ಮಾತನಾಡಿರಬಹುದು. ಸಿದ್ದರಾಮಯ್ಯ ಅನುಭವಿ ರಾಜಕಾರಣಿ. ಅವರು ಏನು ಮಾತಾಡ್ತಾರೆ ಎನ್ನುವುದು ಅವರಿಗೆ ಬಿಡುತ್ತೇನೆ ಎಂದರು.
ಬೆಳಗಾವಿ ತಹಶೀಲ್ದಾರ ಕಾರ್ಯಾಲಯದ ಎಸ್.ಡಿ.ಎ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಯ ವಿರುದ್ಧ 80 ಜನರು ಪತ್ರ ಬರೆದಿರುವ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಕೇಂದ್ರ ಸಚಿವರು, ಇದು ಸರ್ಕಾರದ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿ. ಮುಟ್ಟಿದರೆ ಜನ ಬಿಡಲ್ಲ ಎನ್ನುವ ಸಿಎಂ ಇತ್ತ ಕಡೆ ಗಮನಹರಿಸಿ ಎಚ್ಚೆತ್ತುಕೊಳ್ಳಬೇಕು ಎಂದರು.