ಮನೆ ಅಪರಾಧ ಪತಿ ಚಾಕೋಲೇಟ್ ತಂದು ಕೊಟ್ಟಿಲ್ಲವೆಂದು ಪತ್ನಿ ಆತ್ಮಹತ್ಯೆ

ಪತಿ ಚಾಕೋಲೇಟ್ ತಂದು ಕೊಟ್ಟಿಲ್ಲವೆಂದು ಪತ್ನಿ ಆತ್ಮಹತ್ಯೆ

0

ಬೆಂಗಳೂರು: ಪತಿ ಚಾಕೊಲೇಟ್ ತಂದು ಕೊಡಲಿಲ್ಲ ಎಂದು ಮನನೊಂದ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿದೆ.

Join Our Whatsapp Group

ಈ ಘಟನೆ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ನಂದಿನಿ‌(30) ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

6 ವರ್ಷದ ಹಿಂದೆ ಮದುವೆಯಾಗಿದ್ದ ಮೃತ ನಂದಿನಿ‌ಗೆ ಇಬ್ಬರು ಮಕ್ಕಳಿದ್ದಾರೆ.

ಇನ್ನು ನಂದಿನಿ ಪತಿ ಸಲೂಲ್ ​ನಲ್ಲಿ ಕೆಲಸ ಮಾಡಿಕೊಂಡಿದ್ದ. ಅದರಂತೆ ನಿನ್ನೆ(ಏಪ್ರಿಲ್ 06) ಬೆಳಗ್ಗೆ ಪತಿ ಕೆಲಸಕ್ಕೆ ಹೋಗುವಾಗ ಚಾಕೋಲೆಟ್ ತೆಗೆದುಕೊಂಡು ಬರುವಂತೆ ಹೇಳಿದ್ದಳಂತೆ. ಆದರೆ ಮಧ್ಯಾಹ್ನವಾದರೂ ಪತಿ ಚಾಕೋಲೆಟ್ ತಂದು ಕೊಟ್ಟಿಲ್ಲ. ಫೋನ್ ಮಾಡಿದ್ದರೂ ಪತಿ ಸ್ವೀಕರಿಸಿಲ್ಲವೆಂದು ಮನನೊಂದು ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ.

ಬಳಿಕ ಪತಿ ಮನೆಗೆ ಬಂದು ನೋಡಿದಾಗ ನಂದಿನಿ ನೇಣು ಹಾಕಿಕೊಂಡಿದ್ದಳು. ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆಅಷ್ಟರಲ್ಲಾಗಲೇ ನಂದಿನಿ ಪ್ರಾಣ ಪಕ್ಷಿ ಹಾರಿ ಹೋಗಿತ್ತು.