ಮನೆ ರಾಜಕೀಯ ಜೆಡಿಎಸ್’ನಲ್ಲಿಯೇ ಮುಂದುವರೆಯುತ್ತೇನೆ: ಶಾಸಕ ಜಿ.ಟಿ.ದೇವೇಗೌಡ

ಜೆಡಿಎಸ್’ನಲ್ಲಿಯೇ ಮುಂದುವರೆಯುತ್ತೇನೆ: ಶಾಸಕ ಜಿ.ಟಿ.ದೇವೇಗೌಡ

0

ಮೈಸೂರು(Mysuru): ಜೆಡಿಎಸ್ ವರಿಷ್ಠರಾದ ಹೆಚ್.ಡಿ.ದೇವೇಗೌಡರು ನನ್ನನ್ನು ಪ್ರೀತಿಯ ಹಗ್ಗದಲ್ಲಿ ಕಟ್ಟಿ ಹಾಕಿದ್ದಾರೆ. ನಾನು ಜೆಡಿಎಸ್ ಪಕ್ಷದಲ್ಲಿಯೇ ಮುಂದುವರೆಯುತ್ತೇನೆ ಎಂದು ಶಾಸಕ ಜಿ.ಟಿ.ದೇವೇಗೌಡ ಗದ್ಗದಿತರಾಗಿ ನುಡಿದಿದ್ದಾರೆ.

ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ  ಹಾಗೂ  ಬಿಜೆಪಿನವರು ತಮ್ಮ ಪಕ್ಷಕ್ಕೆ ಸೇರುವಂತೆ ಆಹ್ವಾನಿಸಿದ್ದರು. ಆದರೆ ನಾನು ಜೆಡಿಎಸ್  ಬಿಟ್ಟು ಹೋಗಲ್ಲ ಎಂದು ಸ್ಪಷ್ಟಪಡಿಸಿದರು.

ಹೆಚ್‌.ಡಿ.ದೇವೇಗೌಡರಿಗೆ ನನ್ನ ಬಗ್ಗೆ ಪ್ರೀತಿ ಇದೆ, ಮರಿ ದೇವೇಗೌಡ ಎಂದು ಕರೆಯುತ್ತಿದ್ದರು. ಜಿಟಿಡಿ ಪಕ್ಷ ಬಿಟ್ಟು ಹೋಗಲ್ಲ ಜೆಡಿಎಸ್ ಪಕ್ಷದಲ್ಲೆ ಇರುತ್ತಾನೆ ಎಂದು ಹೆಚ್.ಡಿ.ದೇವೇಗೌಡರು ಹೇಳಿದ್ದರು.

ಹಿಂದೆ ಹಲವು ಸ್ಥಾನ ಕೊಟ್ಟಿದ್ದರು, ಮೂರು ವರ್ಷ ದೂರ ಇದ್ದರೂ ನನ್ನ ಬಗ್ಗೆ ಪ್ರೀತಿ ಕಡಿಮೆ ಆಗಿರಲಿಲ್ಲ. ಹೆಚ್.ಡಿ.ದೇವೇಗೌಡರು ಪ್ರಾದೇಶಿಕ ಪಕ್ಷ ಉಳಿಸಿದರು. ಹೆಚ್.ಡಿ.ದೇವೇಗೌಡರು ಕಂಡ ಕನಸು ನನಸು ಮಾಡುತ್ತೇವೆ. ಜೆಡಿಎಸ್ ಪಕ್ಷ ಅಧಿಕಾರಕ್ಕೆ ತರುತ್ತೇನೆ ಎಂದು ಹೇಳಿದರು.

ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇನೆ. ಯಾವುದೇ ಮುನಿಸು ಇಲ್ಲ, ಒಂದು ದಿನ ಕೂಡ ಪಕ್ಷಕ್ಕೆ ಕಳಂಕ ಅಥವಾ ಧಕ್ಕೆ ತಂದಿಲ್ಲ ಎಂದರು.

ಹಿಂದಿನ ಲೇಖನದೈವ ನರ್ತಕರಿಗೆ ಮಾಸಾಶನ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ
ಮುಂದಿನ ಲೇಖನಮೈಸೂರಿನಲ್ಲಿ 10 ಸಾವಿರ ಕೋಟಿ ರೂ.ವಹಿವಾಟಿನ ಸಾಧನೆ: ಅಶ್ವತ್ಥ ನಾರಾಯಣ