ಮನೆ ರಾಜ್ಯ ಉಡುಪಿ ಜಿಲ್ಲೆಯಲ್ಲಿ ಗಾಳಿ- ಮಳೆ: ಸೂಕ್ತ ಕ್ರಮಕ್ಕೆ ಸೂಚಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಉಡುಪಿ ಜಿಲ್ಲೆಯಲ್ಲಿ ಗಾಳಿ- ಮಳೆ: ಸೂಕ್ತ ಕ್ರಮಕ್ಕೆ ಸೂಚಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

0

ಬೆಂಗಳೂರು: ಉಡುಪಿ ಜಿಲ್ಲೆಯ ಕೆಲವೆಡೆ ಗಾಳಿ ಮತ್ತು ಮಳೆಯಿಂದ ಹಾನಿಯಾಗಿರುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ಪಡೆದಿದ್ದು, ಸೂಕ್ತ ಕ್ರಮಕ್ಕೆ ಸೂಚಿಸಿದ್ದಾರೆ.

Join Our Whatsapp Group

ಬೆಂಗಳೂರಿನಲ್ಲಿರುವ ಸಚಿವೆ ಸಚಿವ ಸಂಪುಟ ಸಭೆಗೆ ಹೊರಡುವ ಮುನ್ನ ಉಡುಪಿಯ ಸದ್ಯದ ಪರಿಸ್ಥಿತಿಯ ಕುರಿತು ಅಧಿಕಾರಿಗಳ ಜೊತೆ ದೂರವಾಣಿ ಮೂಲಕ ಚರ್ಚಿಸಿದರು.

ಜಿಲ್ಲೆಯ ಅಮಾವಾಸ್ಯೆ ಬಯಲು ಸೇರಿದಂತೆ ಕೆಲವೆಡೆ ಮಳೆ, ಗಾಳಿಯಿಂದ ಉಂಟಾಗಿರುವ ಹಾನಿಯ ಮಾಹಿತಿ ಪಡೆದರು.

ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ತೆರಳಿ ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿ, ಪರಿಹಾರಕ್ಕೆ ಕ್ರಮ ಕೈಗಳ್ಳುವಂತೆ ತಿಳಿಸಿದರು.

ಅದರ ಜೊತೆ ಜನರಿಗೆ ಎಚ್ಚರಿಕೆ ಕ್ರಮಗಳ ಕುರಿತು ತಿಳಿಸಬೇಕೆಂದೂ ಸೂಚಿಸಿದರು.

ಹಿಂದಿನ ಲೇಖನಮಹಿಳೆಗೆ ಮಂಪರು ಔಷಧ ನೀಡಿ, ಸಹಚರನ ಜತೆ ಸೇರಿ ರಿಯಲ್​ ಎಸ್ಟೇಟ್​ ಉದ್ಯಮಿಯಿಂದ ಅತ್ಯಾಚಾರ
ಮುಂದಿನ ಲೇಖನಬಂಟ್ವಾಳ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್- ಪ್ರಯಾಣಿಕರು ಪಾರು