ಬೆಳಗಾವಿ: ಬೆಳಗಾವಿ ಸುವರ್ಣ ಸೌಧದಲ್ಲಿ ರಾಜ್ಯ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಅಗಲಿದ ಗಣ್ಯರಿಗೆ ಉಭಯ ಸದನಗಳಲ್ಲಿ ಸಂತಾಪ ಸೂಚಿಸಲಾಯಿತು.
ವಿಧಾನ ಪರಿಷತ್ ನಲ್ಲಿ ಕಲಾಪ ಆರಂಭವಾಗಿದೆ. ಇದೇ ವೇಳೆ ವಿಧಾನಸಭೆಯಲ್ಲಿ ವಂದೇಮಾತರಂ ಮೂಲಕ ಅಧಿವೇಶನಕ್ಕೆ ಚಾಲನೆ ನೀಡಲಾಯಿತು. ಅಗಲಿದ ಗಣ್ಯರಿಗೆ ಉಭಯ ಸದನಗಳಲ್ಲಿ ಸಂತಾಪ ಸೂಚಿಸಲಾಯಿತು.
ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ನೂತನ ಮೂವರು ಶಾಸಕರು ಪ್ರಮಾಣ ವಚನ ಸ್ವೀಕಾರ ಮಾಡಿದರು. ಚನ್ನಪಟ್ಟಣ ಶಾಸಕರಾಗಿ ಸಿಪಿ ಯೋಗೇಶ್ವರ್, ಸಂಡೂರು ಕ್ಷೇತ್ರದ ಶಾಸಕರಾಗಿ ಅನ್ನಪೂರ್ಣ ತುಕರಾಂ, ಶಿಗ್ಗಾಂವಿ ಕ್ಷೇತ್ರದ ಶಾಸಕರಾಗಿ ಯಾಸೀರ್ ಪಠಾಣ್ ಪ್ರಮಾಣವಚನ ಸ್ವೀಕರಿಸಿದರು. ಸ್ಪೀಕರ್ ಯು.ಟಿ ಖಾದರ್ ಪ್ರತಿಜ್ಞಾವಿಧಿ ಬೋಧಿಸಿದರು.