ಹುಬ್ಬಳ್ಳಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನವು ಬಹುತೇಕ ಡಿಸೆಂಬರ್ 4ರಿಂದ ಆರಂಭವಾಗಬಹುದು. ಸದ್ಯದಲ್ಲಿಯೇ ಅಧಿಕೃತವಾಗಿ ಘೋಷಣೆಯಾಗಲಿದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಜನರ ಆಶಯಕ್ಕೆ ಒತ್ತು ಕೊಟ್ಟು ಅಧಿವೇಶನ ನಡೆಸಲಾಗುವುದು. ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಮಹತ್ವ ನೀಡಲಾಗುವುದು ಎಂದರು.