ಬೆಂಗಳೂರು : ಆರ್‌ಎಂಸಿ ಯಾರ್ಡ್ ಮಹಿಳೆ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಕ್ಲೀನ್‌ಚಿಟ್ ಸಿಕ್ಕಿದೆ. ಸಾಕ್ಷ್ಯಾಧಾರ ಕೊರತೆ ಹಿನ್ನೆಲೆ ಎಸ್‌ಐಟಿ ಬಿ ರಿಪೋರ್ಟ್ ಸಲ್ಲಿಕೆ ಮಾಡಿದೆ.
ತಮ್ಮ ಮೇಲಿನ ಆರೋಪ ಸುಳ್ಳೆಂದು ಪ್ರಕರಣ ರದ್ದು, ಕೋರಿ ಮುನಿರತ್ನ ಅರ್ಜಿ ಸಲ್ಲಿಸಿದ್ದರು. ಈಗ, ಆರೋಪ ಸಾಬೀತಾಗಿಲ್ಲವೆಂದು ಬಿ ರಿಪೋರ್ಟ್ ಸಲ್ಲಿಸಲಾಗಿದೆ ಎಂದು ಹೈಕೋರ್ಟ್‌ಗೆ ಶಾಸಕ ಮುನಿರತ್ನ ಪರ ವಕೀಲರ ತಿಳಿಸಿದ್ದಾರೆ.
ಬಂಧಿಸದಂತೆ ನೀಡಿದ್ದ, ಮಧ್ಯಂತರ ತಡೆಯನ್ನು ಹೈಕೋರ್ಟ್ ವಿಸ್ತರಿಸಿದೆ. ಮಹಿಳೆಯೊಬ್ಬರು ಸಾಮೂಹಿಕ ಅತ್ಯಾಚಾರದ ದೂರು ನೀಡಿದ್ದರು. ಆರ್‌ಎಂಸಿ ಯಾರ್ಡ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.
ಮಹಿಳೆ ಮಾತ್ರೆ ಸೇವಿಸುವಾಗಲೂ ರಿಹರ್ಸಲ್ ಮಾಡಿರೋದು ಬೆಳಕಿಗೆ ಬಂದಿದೆ. 8 ಬಾರಿ ರಿಹರ್ಸಲ್ ಮಾಡಿದ್ದಳು. ಆಕೆ ದೇಹದಲ್ಲಿ ನಿದ್ರೆ ಮಾತ್ರೆ ಅಂಶ ಇಲ್ಲ. ಮಹಿಳೆ ಮಾಡಿರುವ ಆರೋಪಕ್ಕೆ ಯಾವುದೇ ಸಾಕ್ಷ್ಯಾಧಾರ ಇಲ್ಲ. ಹೀಗಾಗಿ, ಕೋರ್ಟ್‌ಗೆ ಎಸ್‌ಐಟಿ ಬಿ ರಿಪೋರ್ಟ್ ಸಲ್ಲಿಕೆ ಮಾಡಿದೆ ಎಂದು ತಿಳಿದುಬಂದಿದೆ.















