ಮನೆ ರಾಜ್ಯ ರಾಕೇಶ್‌ ಟಿಕಾಯತ್‌ ಮೇಲೆ ಹಲ್ಲೆ: ಮಹಿಳೆ ಬಂಧನ

ರಾಕೇಶ್‌ ಟಿಕಾಯತ್‌ ಮೇಲೆ ಹಲ್ಲೆ: ಮಹಿಳೆ ಬಂಧನ

0

ಬೆಂಗಳೂರು (Bengaluru): ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ನಡೆಸಿ, ಮುಖಕ್ಕೆ ಕಪ್ಪು ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ಹೈಗ್ರೌಂಡ್ಸ್ ಪೊಲೀಸರು ಬಂಧಿಸಿದ್ದಾರೆ.

ಶ್ರೀ ಶಿವಶಕ್ತಿ ಮಹಿಳಾ ಸಂಘ ಹಾಗೂ ಶ್ರೀ ಶಿವಶಕ್ತಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷೆ ಉಮಾದೇವಿ ಬಂಧಿತ ಆರೋಪಿ. ಈಕೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ 5 ದಿನ ಕಸ್ಟಡಿಗೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ವಿಚಾರಣೆ ವೇಳೆ ಮಹಿಳೆ ತಪ್ಪೊಪ್ಪಿಕೊಂಡಿದ್ದು, ಇದರ ಆಧಾರದ ಮೇಲೆ ಬಂಧನಕ್ಕೊಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ಸಂಬಂಧ ಈ ಹಿಂದೆ ಆರೋಪಿಗಳಾದ ಭರತ್ ಶೆಟ್ಟಿ, ಪ್ರದೀಪ್ ಹಾಗೂ ಶಿವಕುಮಾರ್ ಎಂಬುವವರನ್ನು ವಿಚಾರಣೆಗೊಳಪಡಿಸಿದ್ದರು. ತನಿಖೆ ವೇಳೆ ಉಮಾದೇವಿ ಕೈವಾಡ ಕಂಡು ಬಂದಿದೆ. ಹಾಗಾಗಿ, ಪೊಲೀಸರು ಉಮಾದೇವಿಯನ್ನ ಬಂಧಿಸಿದ್ದಾರೆ.

ಘಟನೆ ದಿನ ಉಮಾದೇವಿ ಮುಂದೆ ನಿಂತು ಕೃತ್ಯ ನಡೆಸಿದ್ದರು ಹೇಳಲಾಗುತ್ತಿದೆ. ಅಲ್ಲದೆ, ಉಮಾದೇವಿ ಮನೆ ಮೇಲೆ ದಾಳಿ ನಡೆಸಿದ ಪೊಲೀಸರಿಗೆ ಮಾರಾಕಾಸ್ತ್ರಗಳು ದೊರೆತಿವೆ. ಸದ್ಯ ಉಮಾದೇವಿಯನ್ನ ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆಂದು ತಿಳಿದುಬಂದಿದೆ.

ಮೇ 30 ರಂದು ಪತ್ರಿಕಾಗೋಷ್ಠಿ ನಡೆಸಲು ಪ್ರೆಸ್ ಕ್ಲಬ್ ಬಂದಿದ್ದ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ಟಿಕಾಯತ್ ಮೇಲೆ ಹಲ್ಲೆ ನಡೆಸಲಾಗಿತ್ತು.