ಮನೆ ಅಪರಾಧ ವಿದ್ಯುತ್ ತಂತಿ ತುಳಿದು ಮಹಿಳೆ ಸಾವು

ವಿದ್ಯುತ್ ತಂತಿ ತುಳಿದು ಮಹಿಳೆ ಸಾವು

0

ಕೆ.ಆರ್.ಪೇಟೆ: ಚೆಸ್ಕಾಂ ಅಧಿಕಾರಿಗಳ ನಿರ್ಲಕ್ಷದಿಂದಾಗಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ಒಂದು ಜೀವವನ್ನು ಬಲಿ ಪಡೆದಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ.

Join Our Whatsapp Group


ತಾಲ್ಲೂಕಿನ ಕಿಕ್ಕೇರಿ ಹೋಬಳಿಯ ಲಕ್ಷ್ಮೀಪುರ ಗ್ರಾಮದ ಗಾಯಿತ್ರಮ್ಮ(೪೫) ಎಂಬುವ ಮಹಿಳೆಯು ಶನಿವಾರ ಬೆಳಗ್ಗೆ ಕೃಷಿ ಕೆಲಸಕ್ಕಾಗಿ ಗ್ರಾಮದ ಪಕ್ಕದಲ್ಲೇ ಇದ್ದ  ತಮ್ಮ ಜಮೀನಿಗೆ ಹೋಗಿದ್ದಾರೆ. ತಮ್ಮ ಜಮೀನಿನಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿಗಳ ಪೈಕಿ ಒಂದು ವಿದ್ಯುತ್ ತಂತಿ ತುಂಡಾಗಿ  ಬಿದ್ದಿದ್ದನ್ನು ಗಮನಿಸದ ಗಾಯಿತ್ರಮ್ಮ ವಿದ್ಯುತ್ ತಂತಿಯನ್ನು ತುಳಿದಿದ್ದು ಇದರಿಂದ ವಿದ್ಯುತ್ ಪ್ರವಹಿಸಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ವಿಷಯ ತಿಳಿದ ಕಿಕ್ಕೇರಿ ಪೋಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರೇವತಿ ಮತ್ತು ಅವರ ತಂಡ ಘಟನೆ ನೆಡೆದ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನೆಡೆಸಿ ಪ್ರಕರಣ ದಾಖಲಿಸಿಕೊಂಡು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಕೆ ಆರ್ ಪೇಟೆಯ ಸಾರ್ವಜನಿಕ ಆಸ್ಪತ್ರೆ ರವಾನಿಸಲಾಯಿತು. ಹಳೆಯ ಹಾಗೂ ಸಾಕಷ್ಟು ಗಂಟುಹಾಕಿರುವ ವಿದ್ಯುತ್ ತಂತಿಗಳನ್ನು ಬದಲಿಸಿ ಹೊಸ ವಿದ್ಯುತ್ ತಂತಿಗಳನ್ನು ಅಳವಡಿಸದಿರುವುದು ಈ ದುರಂತಕ್ಕೆ ಕಾರಣವಾಗಿದ್ದು ಕೂಡಲೇ ಚೆಸ್ಕಾಂ ಅಧಿಕಾರಿಗಳು ತಾಲ್ಲೂಕಿನಾದ್ಯಂತ ಹಳೆಯ ವಿದ್ಯುತ್ ತಂತಿಗಳನ್ನು ಬದಲಿಸಿ ಹೊಸ ತಂತಿಗಳನ್ನು ಹಾಕಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.