ಮನೆ ಸ್ಥಳೀಯ ವಿದ್ಯಾರ್ಥಿಗಳಿಗೆ ಪರಿಣಾಮಕಾರಿ ಕಾರ್ಯಕ್ಷಮತೆಗಾಗಿ ಕಲಿಕೆಯ ವಾತಾವರಣ ಕುರಿತು ಕಾರ್ಯಗಾರ

ವಿದ್ಯಾರ್ಥಿಗಳಿಗೆ ಪರಿಣಾಮಕಾರಿ ಕಾರ್ಯಕ್ಷಮತೆಗಾಗಿ ಕಲಿಕೆಯ ವಾತಾವರಣ ಕುರಿತು ಕಾರ್ಯಗಾರ

0

ಮೈಸೂರು: ವಿಜಯ ವಿಠಲ ವಿದ್ಯಾ ಶಾಲೆಯಲ್ಲಿ ೧೦ನೇ ತರಗತಿಯ ವಿದ್ಯಾರ್ಥಿಗಳಿಗೆ ಪರಿಣಾಮಕಾರಿ ಕಾರ್ಯಕ್ಷಮತೆಗಾಗಿ ಕಲಿಕೆಯ ವಾತಾವರಣ ಎಂಬ ವಿಷಯದಡಿಯಲ್ಲಿ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು.


ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಶ್ರೀನಿವಾಸ್.ಸಿ.ಎಸ್ ಪರಿಣಿತ ಶೈಕ್ಷಣಿಕ ಮನೋವಿಜ್ಞಾನಿ ರವರು ಮಾತನಾಡುತ್ತಾ, ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆಗೆ ಹೇಗೆ ಓದುವುದು? ಓದಿದ್ದನ್ನು ಹೇಗೆ ನೆನಪಿಟ್ಟುಕೊಳ್ಳುವುದು? ಇದರಿಂದ ಸಮಯವನ್ನು ಹೇಗೆ ಉಪಯೋಗಿಸಬೇಕು ಎಂಬುದರ ಬಗ್ಗೆ ಬಹಳ ಸುಲಭವಾಗಿ ಅರ್ಥವಾಗುವಂತೆ ತಿಳಿಸಿಕೊಟ್ಟರು.
ಇದರಿಂದ ಬೋರ್ಡ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಹಾಗೂ ಜೀವನದಲ್ಲಿ ಉತ್ತಮ ಸ್ಥಾನವನ್ನು ಕಲ್ಪಿಸಿಕೊಳ್ಳಬಹುದು ಎಂದು ತಿಳಿಸಿದರು.
ಈಗಿನ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಓದುವಿನ ಬಗೆಗಿನ ಕಷ್ಟಗಳನ್ನು ಹೇಗೆ ನಿವಾರಿಸಬೇಕು ಎಂಬುದಾಗಿ ‘ತ್ವರಿತ ಪರಿಷ್ಕರಣೆ ತಂತ್ರ’ ಎಂಬ ಉಪಾಯವನ್ನು ತಿಳಿಸಿಕೊಟ್ಟರು. ಈ ಉಪಾಯವು ಈಗಾಗಲೇ ಓದಿರುವ ಪಾಠಗಳನ್ನು ಹೇಗೆ ಮನವರಿಕೆ ಮಾಡಿಕೊಳ್ಳಬೇಕು ಎಂಬುದನ್ನು ತಿಳಿಸಿಕೊಡುತ್ತದೆ. ಪರೀಕ್ಷಾ ಕೊಠಡಿಯಲ್ಲಿ ವಿದ್ಯಾರ್ಥಿಗಳು ಮಾಡುವ ತಪ್ಪುಗಳನ್ನು ತಿಳಿಸಿ ಅದನ್ನು ನಿಯಂತ್ರಿಸುವ ಬಗ್ಗೆ ಹೇಳಿಕೊಟ್ಟರು. ಓದುವುದು ಮತ್ತು ಪುನರಾವರ್ತನೆ ಮಾಡುವುದು ಎರಡು ಬೇರೆ ಬೇರೆ ಎಂಬುದನ್ನು ತಿಳಿಸಿದರು.
ಈ ಉಪಾಯವನ್ನು ಈಗಿನಿಂದ ಅಳವಡಿಸಿಕೊಳ್ಳುವುದರಿಂದ ಪರೀಕ್ಷೆಯಲ್ಲಿ ೮೫% ಗಿಂತ ಹೆಚ್ಚು ಅಂಕಗಳನ್ನು ಪಡೆಯುವುದಾಗಿ ವಿದ್ಯಾರ್ಥಿಗಳಿಗೆ ಆಶ್ವಾಸನೆಯನ್ನು ಕೊಟ್ಟರು. ಈ ಅವಧಿಯಲ್ಲಿ ವಿದ್ಯಾರ್ಥಿಗಳು ಅವರು ಕೇಳುವ ಪ್ರಶ್ನೆಗಳಿಗೆ ಉತ್ತರಿಸುವ ಮೂಲಕ ಬಹಳ ಸಂತೋಷದಿAದ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು.
ಈ ಸಂದರ್ಭದಲ್ಲಿ ವಿಜಯ ವಿಠಲ ವಿದ್ಯಾ ಶಾಲೆಯ ಪ್ರಾಂಶುಪಾಲರಾದ ವೀಣಾ.ಎಸ್.ಎ ಹಾಗೂ ಮುಖ್ಯ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.