ಮನೆ Uncategorized ಭ್ರಷ್ಟಚಾರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಕಾಮಗಾರಿ ಸ್ಥಗಿತ: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಎಚ್ಚರಿಕೆ

ಭ್ರಷ್ಟಚಾರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಕಾಮಗಾರಿ ಸ್ಥಗಿತ: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಎಚ್ಚರಿಕೆ

0

ಬೆಂಗಳೂರು: ಭ್ರಷ್ಟಾಚಾರ ನಿಯಂತ್ರಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳದೇ ಇದ್ದರೆ ರಾಜ್ಯದಾದ್ಯಂತ ಒಂದು ತಿಂಗಳ ಕಾಲ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಎಚ್ಚರಿಕೆ ನೀಡಿದೆ.

ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣದ ಕುರಿತು ಬುಧವಾರ ನಡೆದ ಸಂಘದ ಆಡಳಿತ ಮಂಡಳಿ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಈ ವಿಷಯ ತಿಳಿಸಿದರು.

ಭ್ರಷ್ಟಾಚಾರ ಮತ್ತು ಗುತ್ತಿಗೆದಾರರಿಗೆ ನೀಡುತ್ತಿರುವ ಕಿರುಕುಳ ವಿರೋಧಿಸಿ ಮೇ 25ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗುವುದು‌. 50,000 ಗುತ್ತಿಗೆದಾರರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಪ್ರಧಾನಿ, ಮುಖ್ಯಮಂತ್ರಿ, ರಾಜ್ಯಪಾಲರಿಗೆ ದೂರು ನೀಡಿದರೂ ಭ್ರಷ್ಟಾಚಾರ ನಿಯಂತ್ರಣಕ್ಕೆ ಬಂದಿಲ್ಲ. ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದಿಂದಾಗಿಯೇ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವಿಗೆ ಸರ್ಕಾರವೇ ಹೊಣೆ ಎಂದರು.ಮುಂದಿನ ವಾರ ಸಂಘದ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಗುವುದು. ಸರ್ಕಾರದಲ್ಲಿನ ಭ್ರಷ್ಟಾಚಾರ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು. ಸರ್ಕಾರದ ಧೋರಣೆ ವಿರೋಧಿಸಿ ಒಂದು ತಿಂಗಳ ಕಾಲ ಎಲ್ಲ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗುವುದು ಎಂದರು.

ಹಿಂದಿನ ಲೇಖನಕಬ್ಬಿಣದ ರಥಕ್ಕೆ ವಿದ್ಯುತ್ ತಂತಿ ತಗುಲಿ ಓರ್ವ ಸಾವು, 13 ಜನರಿಗೆ ಗಾಯ
ಮುಂದಿನ ಲೇಖನಐವರ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ