ಮನೆ ಕ್ರೀಡೆ ವಿಶ್ವ ಅಥ್ಲೆಟಿಕ್ ಚಾಂಪಿಯನ್‌ಷಿಪ್‌: ಫೈನಲ್ಸ್‌ ಗೆ ತಲುಪಿದ ನೀರಜ್‌ ಚೋಪ್ರಾ

ವಿಶ್ವ ಅಥ್ಲೆಟಿಕ್ ಚಾಂಪಿಯನ್‌ಷಿಪ್‌: ಫೈನಲ್ಸ್‌ ಗೆ ತಲುಪಿದ ನೀರಜ್‌ ಚೋಪ್ರಾ

0

ಅಮೆರಿಕಾ (America): ಟೋಕಿಯೊ ಒಲಿಂಪಿಕ್ ಚಾಂಪಿಯನ್‌, ಭಾರತದ ಜಾವೆಲಿನ್‌ ಸ್ಪರ್ಧಿ ನೀರಜ್‌ ಚೋಪ್ರಾ ಅವರು ವಿಶ್ವ ಅಥ್ಲೆಟಿಕ್ ಚಾಂಪಿಯನ್‌ಷಿಪ್‌ನ ಪುರುಷರ ಜಾವೆಲಿನ್‌ ಥ್ರೊ ಸ್ಪರ್ಧೆಯ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ.

ನೀರಜ್ ಚೋಪ್ರಾ ಅವರು ಜಾವೆಲಿನ್ ಥ್ರೋ ಪಂದ್ಯಾವಳಿಯಲ್ಲಿ ತಮ್ಮ ಮೊದಲ ಪ್ರಯತ್ನದಲ್ಲಿಯೇ ಫೈನಲ್‌ಗೆ ಅರ್ಹತೆ ಪಡೆದಿದ್ದಾರೆ. ಆ ಮೂಲಕ ಇದೇ ಮೊದಲ ಬಾರಿಗೆ ವಿಶ್ವ ಅಥ್ಲೆಟಿಕ್ಸ್‌ನಲ್ಲಿ ಫೈನಲ್‌ ತಲುಪಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪುರುಷರ ಜಾವೆಲಿನ್‌ ಥ್ರೊ ಫೈನಲ್ಸ್ ಭಾನುವಾರ ನಡೆಯಲಿದೆ.

ಇಂದು ನಡೆದ ಚಾಂಪಿಯನ್‌ಷಿಪ್‌ನ ಅರ್ಹತಾ ಸುತ್ತಿನಲ್ಲಿ 88.39 ಮೀಟರ್ಸ್ ಸಾಧನೆ ಮಾಡಿದ್ದಾರೆ. ಅಲ್ಲದೆ, ನೀರಜ್‌ ಫೈನಲ್‌ ಗೆ ಅರ್ಹತೆ ಪಡೆಯಲು ಕೇವಲ 10 ಸೆಕೆಂಡುಗಳನ್ನಷ್ಟೇ ತೆಗೆದುಕೊಂಡರು.

ನಿಯಮಗಳ ಪ್ರಕಾರ, ಭಾನುವಾರದ ಫೈನಲ್‌ಗೆ ತಲುಪಲು 83.50 ಮೀಟರ್‌ಗಳ ಜಾವೆಲಿನ್ ಥ್ರೋ ಎಸೆಯುವ ಅಗತ್ಯವಿತ್ತು. ಫೈನಲ್​ಗೆ ಅಂತಿಮವಾಗಿ 12 ಅತ್ಯುತ್ತಮ ಪ್ರದರ್ಶನ ನೀಡುವ ಆಟಗಾರರಿಗೆ ಮಾತ್ರ ಅವಕಾಶ ಸಿಗುತ್ತದೆ. ಅದರಂತೆ ಅರ್ಹತಾ ಸುತ್ತಿನಲ್ಲಿ ಚೋಪ್ರಾ ಮೊದಲ ಪ್ರಯತ್ನದಲ್ಲೇ 88.39 ಮೀ. ಜಾವೆಲಿನ್​ ಎಸೆದು ಫೈನಲ್​ ತಲುಪಿದ್ದಾರೆ.

ಹಿಂದಿನ ಲೇಖನದೇಶದಲ್ಲಿ 21,566 ಮಂದಿಗೆ ಕೋವಿಡ್‌ ಪಾಸಿಟಿವ್‌
ಮುಂದಿನ ಲೇಖನಭಾರತೀಯ ಭಾಷೆಗಳ ಕೇಂದ್ರೀಯ ಸಂಸ್ಥೆ: ಕನ್ನಡ ಸಂಪನ್ಮೂಲ ವ್ಯಕ್ತಿಗಳಿಂದ ಅರ್ಜಿ ಆಹ್ವಾನ