ಧರ್ಮಶಾಲಾ (ಹಿಮಾಚಲ ಪ್ರದೇಶ): ನೆದರ್ಲೆಂಡ್ ಎದುರು ಬೃಹತ್ ಹ್ಯಾಟ್ರಿಕ್ ಜಯದ ಆಸೆಯಲ್ಲಿದ್ದ ದಕ್ಷಿಣ ಆಫ್ರಿಕಾ ಹೀನಾಯ ಸೋಲು ಕಂಡಿತು. ಡಚ್ಚರ ಕರಾರುವಾಕ್ ದಾಳಿಗೆ ಹರಿಣಗಳು ತತ್ತರಿಸಿ ಹೋದರು. ನೆದರ್ಲೆಂಡ್ ನೀಡಿದ್ದ 246 ರನ್ ಗುರಿ ಬೆನ್ನತ್ತಿದ ಬವುಮಾ ಪಡೆ 42.5 ಓವರ್ ಗಳಲ್ಲಿ 207 ರನ್ ಗಳಿಗೆ ಸರ್ವಪತನ ಕಂಡಿತು. ಇದರಿಂದ ಡಚ್ಚರು 38 ರನ್ ಗಳಿಂದ ರೋಚಕ ಗೆಲುವು ದಾಖಲಿಸಿದರು.
ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡವು ಬೌಲಿಂಗ್ ಆಯ್ದುಕೊಂಡಿತು. ಮಳೆಯಿಂದಾಗಿ ತಲಾ 43 ಓವರ್ಗಳಿಗೆ ಸೀಮಿತವಾಗಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನೆದರ್ಲೆಂಡ್ಸ್ ತಂಡವು ನಿಗದಿತ 43 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 245 ರನ್ ಕಲೆಹಾಕಿತು.
ಗುರಿಯನ್ನು ಬೆನ್ನತ್ತಿದ ಸೌತ್ ಆಫ್ರಿಕಾ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. ಕ್ವಿಂಟನ್ ಡಿಕಾಕ್ 20 ರನ್ ಗಳಿಸಿ ವಿಕೆಟ್ ಒಪ್ಪಿಸಿದರೆ, ನಾಯಕ ಟೆಂಬಾ ಬವುಮಾ 16 ರನ್ ಗಳಿಸಿ ಕ್ಲೀನ್ ಬೌಲ್ಡ್ ಆದರು. ಆ ಬಳಿಕ ರಾಸ್ಸಿ ವಂಡೆರ್ ಡಸ್ಸೆನ್ (4) ಹಾಗೂ ಐಡೆನ್ ಮಾರ್ಕ್ರಾಮ್ (1) ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ಹೆನ್ರಿಕ್ ಕ್ಲಾಸೆನ್ ಹಾಗೂ ಡೇವಿಡ್ ಮಿಲ್ಲರ್ ಉತ್ತಮ ಜೊತೆಯಾಟ ಪ್ರದರ್ಶಿಸಿದರು. 28 ರನ್ ಗಳಿಸಿ ಆಪಾಯಕಾರಿಯಾಗುವ ಸೂಚನೆ ನೀಡಿದ್ದ ಕ್ಲಾಸೆನ್ ಅವರನ್ನು ಔಟ್ ಮಾಡುವಲ್ಲಿ ವ್ಯಾನ್ ಬೀಕ್ ಯಶಸ್ವಿಯಾದರು.ಪರಿಣಾಮ 89 ರನ್ ಗಳಿಗೆ ಸೌತ್ ಆಫ್ರಿಕಾ ತಂಡವು 5 ವಿಕೆಟ್ ಕಳೆದುಕೊಂಡಿತು.
ಬಳಿಕ ಬಂದ ಮಾರ್ಕೊ ಯಾನ್ಸನ್ 9 ರನ್ ಗಳಿಸಿ ಕ್ಲೀನ್ ಬೌಲ್ಡ್ ಆಗಿ ನಿರ್ಗಮಿಸಿದರು. ಡೇವಿಡ್ ಮಿಲ್ಲರ್ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದ್ದರು. 52 ಎಸೆತಗಳಲ್ಲಿ 43 ರನ್ ಬಾರಿಸಿದ್ದರು. ಡೇವಿಡ್ ಮಿಲ್ಲರ್ ನನ್ನು ವ್ಯಾನ್ ಬೀಕ್ ಬೌಲ್ಡ್ ಮಾಡಿದರು . ಇದರ ಬೆನ್ನಲ್ಲೇ ಜೆರಾಲ್ಡ್ ಕೋಟ್ಝಿ (22) ಕೂಡ ವಿಕೆಟ್ ಒಪ್ಪಿಸಿದರು. ಇನ್ನು ಕಗಿಸೊ ರಬಾಡ ಇನಿಂಗ್ಸ್ 9 ರನ್ ಗಳಿಗೆ ವಿಕೆಟ್ ಒಪ್ಪಿಸಿದರು. ಅಂತಿಮವಾಗಿ 42.5 ಓವರ್ ಗಳಲ್ಲಿ 207 ರನ್ ಗಳಿಗೆ ಆಲೌಟ್ ಆಗಿತ್ತು. ಸೌತ್ ಆಫ್ರಿಕಾ ತಂಡವು 38 ರನ್ ಗಳಿಂದ ಸೋಲೊಪ್ಪಿಕೊಂಡಿತು.