ಇಂದು ಬಲಿಷ್ಠ ತಂಡಗಳಾದ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ಮುಖಾಮುಖಿಯಾಗುತ್ತಿವೆ.
ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಉಭಯ ತಂಡಗಳ ನಡುವೆ ಈ ಹಣಾಹಣಿ ನಡೆಯಲಿದೆ. ಈ ಎರಡೂ ತಂಡಗಳು ಪಾಯಿಂಟ್ ಪಟ್ಟಿಯಲ್ಲಿ ಅಗ್ರ-5ರಲ್ಲಿ ಸ್ಥಾನ ಪಡೆದಿವೆ. ಇಂತಹ ಪರಿಸ್ಥಿತಿಯಲ್ಲಿ ಯಾವ ತಂಡ ಗೆದ್ದರೂ ಸೆಮಿಫೈನಲ್ ಕಡೆಗೆ ಮತ್ತೊಂದು ಬಲಿಷ್ಠ ಹೆಜ್ಜೆ ಇಡಲಿದೆ. ಅದೇ ಸಮಯದಲ್ಲಿ, ಸೋತ ತಂಡಕ್ಕೆ ಸೆಮಿಸ್ ಲೆಕ್ಕಾಚಾರದಲ್ಲಿ ದೊಡ್ಡ ಹೊಡೆತ ಬೀಳಲಿದೆ.
ಸತತ ಎರಡು ಸೋಲುಗಳನ್ನು ಎದುರಿಸಿರುವ ನ್ಯೂಜಿಲೆಂಡ್ ಗೆ ಈ ಪಂದ್ಯ ಗೆಲ್ಲುವುದು ಅತ್ಯಂತ ಮಹತ್ವದ್ದಾಗಿದೆ.
ನ್ಯೂಜಿಲೆಂಡ್ ತಂಡ: ಡೆವೊನ್ ಕಾನ್ವೆ, ವಿಲ್ ಯಂಗ್, ರಚಿನ್ ರವೀಂದ್ರ, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್/ನಾಯಕ), ಗ್ಲೆನ್ ಫಿಲಿಪ್ಸ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಮ್ಯಾಟ್ ಹೆನ್ರಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್, ಟಿಮ್ ಸೌಥಿ, ಇಶ್ ಸೋಧಿ, ಮಾರ್ಕ್ ಚಾಪ್ಮನ್.
ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್, ಟೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಏಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಯಾನ್ಸನ್, ಜೆರಾಲ್ಡ್ ಕೊಯೆಟ್ಜಿ, ಕೇಶವ್ ಮಹಾರಾಜ್, ಲುಂಗಿ ಎನ್ಗಿಡಿ, ತಬ್ರೈಜ್ ಶಮ್ಸಿ, ರೀಜಾ ಹೆಂಡ್ರಿಕ್ಸ್, ಕಗಿಸೊ ರಬಾಡ, ಆಂಡಿಲೆ ಫೆಹ್ಲುಕ್ವಾಯೊ, ಲಿಜಾಡ್ ವಿಲಿಯಮ್ಸ್.