ಮೈಸೂರು: ವಿಶ್ವ ಪರಿಸರ ದಿನದ ಅಂಗವಾಗಿ ಮೈಸೂರಿನ ರೋಟರಿ ಮಿಡ್ಟೌನ್ ಅಕಾಡೆಮಿ ಶಾಲೆಯಲ್ಲಿ ಹಾಗೂ ನಗರಸಭೆ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ರಮೇಶ್ ವೈ. ಭಾಗವಹಿಸಿ ಪರಿಸರ ಸಂರಕ್ಷಣೆಯ ಮಹತ್ವವನ್ನು ತಿಳಿಸಿದರು. ನಗರಸಭೆಯ ಆಯುಕ್ತರು ಸಹ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಹಸಿರು ಪರಿಸರ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ರೋಟರಿ ಮಿಡ್ಟೌನ್ ಅಕಾಡೆಮಿಯ ಅಧ್ಯಕ್ಷರಾದ ಆರ್ಟಿಎನ್. ನರೇಂದ್ರ ಬಾಬು, ಖಜಾಂಚಿ ಆರ್ಟಿಎನ್. ಪವಿತ್ರನ್, ಶಾಲೆಯ ಪ್ರಾಂಶುಪಾಲರಾದ ಆತ್ಮಾನಂದ, ಮುಖ್ಯ ಶಿಕ್ಷಕಿಯರಾದ ಶ್ರೀಮತಿ ಸಾರಲಿ ಹಾಗೂ ಶ್ರೀಮತಿ ನಿವೇದಾ ಸೇರಿದಂತೆ ಶಾಲೆಯ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು.
















